Breaking News

`LPG’ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಮೋದಿ ಸರ್ಕಾರ ಕನ್ನ ಹಾಕುತ್ತಿದೆ : ಈಶ್ವರ್ ಖಂಡ್ರೆ ಕಿಡಿ

Spread the love

ಬೆಂಗಳೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನು ಧೀಡಿರ್ ಆಗಿ ರದ್ದುಗೊಳಿಸುವ ಮೂಲಕ ಮಧ್ಯಮ ವರ್ಗದ ಜನರಿಗೆ ಮೋಸ ಮಾಡಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ್ ಖಂಡ್ರೆ, ಈಶ್ವರ್ ಖಂಡ್ರೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಗ್ಯಾಸ್ ಸಬ್ಸಿಡಿಯನ್ನ ಧಿಡೀರ್ ಆಗಿ ರದ್ದುಗೊಳಿಸಿದೆ.‌ ಮಹಿಳೆಯರ ವೋಟ್ ಪಡೆದು ಅಧಿಕಾರಕ್ಕೆ ಬಂದ ಮೋದಿ ಸರ್ಕಾರ ಈಗ ಮಹಿಳೆಯರು ಬಳಸುವ ಗ್ಯಾಸ್ ಸಿಲೆಂಡರ್ ನ ಸಬ್ಸಿಡಿಯನ್ನೇ ರದ್ದುಗೊಳಿಸಿದ್ದು ಮಧ್ಯಮ ವರ್ಗದ ಜನರಿಗೆ ಮಾಡಿದ ಮೋಸ ಎಂದು ಕಿಡಿಕಾರಿದ್ದಾರೆ.

ಉಜ್ವಲ ಹೆಸರಲ್ಲಿ ಪ್ರಚಾರಗಿಟ್ಟಿಸುವ ಬಿಜೆಪಿ ಈಗ ಸಬ್ಸಿಡಿ ರದ್ದು ಮಾಡಿ ಮಹಿಳೆಯರು ಕೂಡಿಡುವ ಡಬ್ಬಿ ಹಣಕ್ಕೂ ಕನ್ನಹಾಕುತ್ತಿದೆ.

ಈಗ ಹೇಳಿ ಸಬ್ಸಿಡಿ ರದ್ದು ಮಾಡಿದ್ದು ನಿಮ್ಮ ಸರ್ಕಾರವೋ ಅಥವಾ ಅದು ಕೂಡ ACT OF GOD ಪರಿಣಾಮವೋ? ಎಂದು ವ್ಯಂಗ್ಯವಾಡಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಡಿಕೆಶಿ-ಸತೀಶ್ ಜಾರಕಿಹೊಳಿ ತಡರಾತ್ರಿ ಭೇಟಿ ಕುತೂಹಲ; ಸತೀಶ್ ಜಾರಕಿಹೊಳಿ ಬೆಂಬಲ ಕೋರಿದ ಡಿಕೆಶಿ?

Spread the loveಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಆಪ್ತ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಸತೀಶ್ ಜಾರಕಿಹೊಳಿ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಮಂಗಳವಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ