Breaking News

ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರ ಅಡ್ಡಿ

Spread the love

ಖಾನಾಪುರ: ತಾಲ್ಲೂಕಿನಲ್ಲಿ  ಸಂಸದ ಅನಂತಕುಮಾರ್ ಹೆಗಡೆ ನಡೆಸಲಿರುವ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕಿ ಅಂಜಲಿ ನಿಂಬಾಳಕರ ಅವರ ಬೆಂಬಲಿಗರು ಅಡ್ಡಿ ಪಡೆಸಿದ್ದು,  ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಶಾಸಕಿ ಅಂಜಲಿ ನಿಂಬಾಳಕರ ಕೊರೊನಾದಿಂದ ಕ್ವಾರಂಟೈನ್ ನಲ್ಲಿ ಇದ್ದಾರೆ. ಇಂತಹ ಸಂದರ್ಭದಲ್ಲಿ ಉದ್ದೇಶ ಪೂರ್ವಕವಾಗಿ ವಿವಿಧ ಗ್ರಾಮಗಳಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ ಭೂಮಿ ಪೂಜೆಯನ್ನು ಸಂಸದ ಅನಂತಕುಮಾರ್ ಹೆಗಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.

ಭೂಮಿ ಪೂಜೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಆಹ್ವಾನ ನೀಡಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಲು ಯತ್ನಿಸಿದರು. ಇದರಿಂದ ಪೊಲೀಸರು 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳದಲ್ಲಿ ಗೊಂದಲದ  ವಾತಾವರಣ ನಿರ್ಮಾಣವಾಯಿತು. ಬಿಗಿ ಬಂದೋಬಸ್ತೆ ಏರ್ಪಡಿಸಲಾಗಿದೆ.


Spread the love

About Laxminews 24x7

Check Also

ಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ ಉದ್ಯಾನವನ

Spread the loveಅಥಣಿ ನಗರದಲ್ಲಿ ಇಂದು ರೋಟರಿ ಸಂಸ್ಥೆ ಅಧೀನದಲ್ಲಿ ಶ್ರೀ ಜ್ಯೋತಿಬಾ ದೇವಸ್ಥಾನ ಆವರಣದಲ್ಲಿ ನೂತನವಾಗಿ ನಿರ್ಮಿಸಿದ ರೋಟರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ