Breaking News
Home / ಜಿಲ್ಲೆ / ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ

ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ

Spread the love

ಅಪಘಾತ ವಲಯಗಳಲ್ಲಿ ಅಪಘಾತ ವಲಯ, ನಿಧಾನವಾಗಿ ಸಾಗಿ ಎಂಬಂತಹ ಸೂಚನಾ ಫಲಕಗಳನ್ನು ಅಳವಡಿಸುವ ಕಾರ್ಯ ಮಾಡಬೇಕೆಂದು ಜಿಲ್ಲಾಧಿಕಾರಿ ಡಾ. ಹರೀಶ ಕುಮಾರ ಕೆ. ಅವರು ಸೂಚಿಸಿದರು.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ, ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಪ್ರಮುಖವಾಗಿ ೩೬ ಸ್ಥಳಗಳನ್ನು ಅಪಘಾತವಲಯಗಳೆಂದು ಗುರುತಿಸಿದ್ದು, ೩೬ ಸ್ಥಳಗಳಲ್ಲೂ ಕೂಡ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಅಪಘಾತ ವಲಯವಿದೆ ಎನ್ನುವಂತಹ ಫಲಕಗಳನ್ನು ಹಾಕುವ ಮೂಲಕ ಮಾರಣಾಂತಿಕ ಅಪಘಾತಗಳ ಸಂಖ್ಯೆಗಳನ್ನು ಇಳಿಸುವ ಕೆಲಸ ಮಾಡಬೇಕು ಎಂದರು.
ಸಾರ್ವಜನಿಕರಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಕಾರ್ಯ ಮಾಡಬೇಕು ಮುಖ್ಯವಾಗಿ ದ್ವಿಚಕ್ರ ವಾಹನ ಸವಾರ ಹಾಗೂ ಸಹ ಸವಾರರು ಹೆಲ್ಮೆಟ್ ದರಿಸುವುದು, ಲೇನ್ ಡ್ರೈವಿಂಗ್ ಮತ್ತು ವೇಗದ ಚಾಲನೆ, ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವುದು, ಸೀಟ್ ಬೆಲ್ಟ್ ದರಿಸುವಿಕೆ ಕುರಿತು ಜಾಗೃತಿ ಮೂಡಿಸಬೇಕು ಮತ್ತು ಟೋಲ್‌ಗಳಲ್ಲಿ ರಸ್ತೆ ಸುರಕ್ಷತಾ ಕ್ರಮಗಳ ಫಲಕಗಳನ್ನು ಅಳವಡಿಸುವ ಕಾರ್ಯ ಮಾಡಬೇಕೆಂದರು.
ಅಪಘಾತವಾದ ಸಂಧರ್ಭದಲ್ಲಿ ತುರ್ತು ಚಿಕಿತ್ಸೆ ಅತ್ಯವಶ್ಯಕವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ ತುರ್ತು ಚಿಕಿತ್ಸೆಯ ಗುಣಮಟ್ಟವನ್ನು ಉತ್ತಮಗೊಳಿಸಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಜಿಲ್ಲಾ ಆಸ್ಪತ್ರೆ ಮುಖ್ಯಸ್ಥರು ಮತ್ತು ವೈದ್ಯಕೀಯ ಮುಖ್ಯಸ್ಥರು ಸಮನ್ವಯ ಸಾಧಿಸಿಕೊಂಡು ವಿವಿಧ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು, ಕೆ.ಎಸ್. ಆರ್.ಟಿ.ಸಿ ವಾಹನ ಚಾಲಕರಿಗೆ ರಸ್ತೆ ಅಪಘಾತಕ್ಕಿಡಾದವರ ನಿರ್ವಹಣೆ ಬಗ್ಗೆ ತರಬೇತಿ ನೀಡುವ ಕಾರ್ಯವಾಗಬೇಕೆಂದು ಸೂಚಿಸಿದರು.
ವೈದ್ಯಕೀಯ ಕಾಲೇಜಿನ ನೋಡಲ್ ಅಧಿಕಾರಿಯು, ಪೊಲೀಸ್ ಮತ್ತು ಆಸ್ಪತ್ರೆ ದಾಖಲೆಗಳ ಹೊಂದಾಣಿಕೆಯಿಂದ ಪ್ರಸ್ತುತ ರಸ್ತೆ ಅಪಘಾತಗಳಿಂದಾಗಿರುವ ಮರಣ ಹಾಗೂ ಗಂಭೀರ ಗಾಯಗಳನ್ನು ಹೊಂದಿರುವ ಪ್ರಮಾಣದ ಗುರುತಿಸುವಿಕೆಯೊಂದಿಗೆ ಜಿಲ್ಲೆಯಲ್ಲಿ ಆಗುತ್ತಿರುವ ರಸ್ತೆ ಅಪಘಾತಗಳ ವಿಶ್ಲೇಷಣೆಯನ್ನು ಮಾಡಬೇಕೆಂದರು.
ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಿ.ಎನ್ ಅಶೋಕ ಕುಮಾರ ಸೇರಿದಂತೆ ಇತರರು ಹಾಜರಿದ್ದರು.


Spread the love

About Laxminews 24x7

Check Also

ಬೆಂ.ಗ್ರಾದಲ್ಲಿ ಕಾಂಗ್ರೆಸ್​ನಿಂದ ಗ್ಯಾರಂಟಿ ಕಾರ್ಡ್​​ ಹಂಚಿಕೆ ಆರೋಪ; BJP-JDS ಕಾರ್ಯಕರ್ತರ ಮೇಲೆ ಹಲ್ಲೆ!

Spread the love ರಾಮನಗರ: ಬೆಂಗಳೂರು ಗ್ರಾಮಾಂತರದ (Bengaluru Rural) ರಾಮನಗರದಲ್ಲಿ (Ramanagara) ಕಾಂಗ್ರೆಸ್ ಕಾರ್ಯಕರ್ತರು, ಡಿಸಿಎಂ ಡಿಕೆ ಶಿವಕುಮಾರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ