Breaking News

ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೋದನೆ: ಸುರೇಶ್ ಅಂಗಡಿ

Spread the love

ಬೆಳಗಾವಿ,  : ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರು-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆಗೆ ಅನುಮೊದನೆ ದೊರೆತಿದ್ದು, ಈ ಯೋಜನೆಗೆ 927.40 ಕೋಟಿ ವೆಚ್ಚವಾಗಲಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಸೋಮವಾರ ಬೆಳಗಾವಿ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಗೊಂಡಲ್ಲಿ ಪ್ರಮುಖ ನಗರಗಳಾದ ಬೆಳಗಾವಿ, ಧಾರವಾಡ ಹಾಗೂ ಹುಬ್ಬಳ್ಳಿಗೆ ಕಡಿಮೆ ಸಮಯದಲ್ಲಿ ಸಂಪರ್ಕ ಸಾಧ್ಯವಾಗಲಿದೆ. ಜತೆಗೆ ಮುಂದಿನ ವರ್ಷಗಳಲ್ಲಿ ಅಭಿವೃದ್ಧಿಗೊಳ್ಳಲಿರುವ ಬೆಳಗಾವಿ-ಕಿತ್ತೂರು-ಧಾರವಾಡ ಕೈಗಾರಿಕಾ ಕಾರಿಡಾರ್ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಈ ಮೊದಲು ರೈಲು ಮಾರ್ಗ ಯೋಜನೆಗೆ ಅನುಮೋದನೆ ದೊರೆತಿರಲಿಲ್ಲ. ಹೀಗಾಗಿ, ಹೊಸದಾಗಿ ಸಮೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು.

ಕೇವಲ 2 ವರ್ಷಗಳ ಅವಧಿಯಲ್ಲಿ ಸಮೀಕ್ಷೆ ಪೂರ್ಣಗೊಂಡಿರುವುದು ದಾಖಲೆಯಾಗಿದೆ. ಈ ಹೊಸ ಮಾರ್ಗಕ್ಕೆ ಉಚಿತವಾಗಿ ಭೂಮಿ ಮತ್ತು ಶೇ.50ರಷ್ಟು ನಿರ್ಮಾಣ ವೆಚ್ಚ ನೀಡಲು ಬದ್ಧವಾಗಿರುವುದಾಗಿ ರಾಜ್ಯ ಸರಕಾರ ತಿಳಿಸಿದೆ ಎಂದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ