Breaking News

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

Spread the love

ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ:ಸಚಿವ ರಮೇಶ ಜಾರಕಿಹೊಳಿ

ಮುಂದೆ ಒಳ್ಳೆ ದಿನಗಳು ಬಂದಾಗ ಗೊತ್ತಾಗುತ್ತೆ/ಕಾಂಗ್ರೆಸ್ ಮುಖಂಡರ ವಿರುದ್ಧ ಹರಿಹಾಯ್ದ ಸಚಿವರು/ಎಂ.ಕೆ.ಹುಬ್ಬಳ್ಳಿಯಲ್ಲಿ ರಮೇಶ್ ಜಾರಕಿಹೊಳಿ‌ ಹೇಳಿಕೆ

ಬೆಳಗಾವಿ: ಮಾರ್ಚ 9 : ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ.ವಿಶೇಷವಾಗಿ ‌ನೀರಾವರಿಗೆ ಹೆಚ್ಚಿನ ಒತ್ತು ಕೊಡುವುದಲ್ಲದೆ ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆಂದು ಎಂ.ಕೆ.ಹುಬ್ಬಳ್ಳಿಯಲ್ಲಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಹೇಳಿದರು.ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿದ ಸಚಿವರು ಯಾರು ದರಿದ್ರರು ಎಂಬುವುದನ್ನು ಜನ ತೀರ್ಮಾನ ಮಾಡ್ತಾರೆ. ಮುಂದೆ ಒಳ್ಳೆಯ ದಿನಗಳು ಬಂದಾಗ ಅವರಿಗೆ ಗೊತ್ತಾಗುತ್ತೆ ಎಂದು ಬಜೆಟ್ ವಿರುದ್ಧ ಮಾತನಾಡಿದ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.

ಇನ್ನು ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್ ನೀಡುವುದಲ್ಲದೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಕೊಟ್ಟಿದಕ್ಕೆ ಯಡಿಯೂರಪ್ಪರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ