ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಹಾಟ್‍ಸ್ಪಾಟ್ ಜಿಲ್ಲೆಗಳ ಮೇಲೆ ನೇರ ನಿಗಾಯಿಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಪ್ರದೇಶಗಳಲ್ಲಿ ಟೆಸ್ಟಿಂಗ್, ಟ್ರೇಸಿಂಗ್, ಟ್ರೀಟ್ ಮೆಂಟ್ ವಿಚಾರದಲ್ಲಿ ಆಗಿರುವ ತಪ್ಪುಗಳನ್ನು ತಿದ್ದಲು ಆರೋಗ್ಯ ಇಲಾಖೆ ನಿರ್ಧರಿಸಿದೆ.
ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶದ 17 ಹಾಟ್‍ಸ್ಪಾಟ್ ಜಿಲ್ಲೆಗಳ ಮುಖ್ಯ ಆರೋಗ್ಯ ಅಧಿಕಾರಿಗಳ ಜೊತೆಗೆ ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಗಳು ಸಭೆ ನಡೆಸಿದ್ದಾರೆ. ಭಾರತದ ಒಟ್ಟು ಸೋಂಕಿತರ ಸಂಖ್ಯೆ ಪೈಕಿ 17 ಜಿಲ್ಲೆಗಳಿಂದ ಶೇ.46ರಷ್ಟು ಸೋಂಕಿತರಿದ್ದು, ಈ ಜಿಲ್ಲೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದೆ
17 ಜಿಲ್ಲೆಗಳಲ್ಲಿ ಕೊಪ್ಪಳ, ಮೈಸೂರು, ದಾವಣಗೆರೆ ಹಾಗೂ ಬಳ್ಳಾರಿ ಜಿಲ್ಲೆಗನ್ನು ಒಳಗೊಂಡಿದೆ. ಆಯಾ ಜಿಲ್ಲೆಯ ಮುಖ್ಯ ಆರೋಗ್ಯ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿ ಕೊರೊನಾ ಸೋಂಕು ತಡೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವಿವರಣೆ ನೀಡಿದ್ದಾರೆ.
ಸಭೆಯಲ್ಲಿ ಮರಣ ದರವನ್ನು ಶೇ.1ಕ್ಕಿಂತ ಕಡಿಮೆ ಗೊಳಿಸಲು ಸೂಚನೆ ಮತ್ತು ಸೋಂಕು ನಿಯಂತ್ರಣ ಕ್ರಮಗಳು ಕುರಿತು ವಿಸ್ತೃತ ಲಿಖಿತ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಅಗತ್ಯ ಸಂದರ್ಭಗಳಲ್ಲಿ ಏಮ್ಸ್ ವೈದ್ಯರ ತಂಡದ ಸಹಾಯ, ಸಲಹೆ ಪಡೆಯಲು ಸೂಚನೆ ನೀಡಲಾಗಿದೆ.
Laxmi News 24×7