Breaking News

ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ

Spread the love

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‍ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ ಬಿಗ್‍ಬಾಸ್ ನಡೆಯುವುದಿಲ್ಲ ಎಂಬ ಸುದ್ದಿ ಪ್ರಕಟವಾಗಿದೆ.

ಖಾಸಗಿ ವಾಹಿನಿಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ ತಿಂಗಳಿನಿಂದ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಶೋ ಶುರು ಮಾಡಲು ಸಾಧ್ಯವಾಗಿಲ್ಲ.

ಮಾಹಿತಿ ಪ್ರಕಾರ, ಇನ್ನು ಆರು ತಿಂಗಳು ನಂತರ ತಡವಾಗಿ ಬಿಗ್‍ಬಾಸ್ ಶುರುವಾಗಲಿದೆ ಎನ್ನಲಾಗುತ್ತಿದೆ. ಅಂದರೆ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಶುರುವಾಗಲಿದೆ. ಹೀಗಾಗಿ ಸದ್ಯಕ್ಕೆ 2020ರಲ್ಲಿ ಬಿಗ್‍ಬಾಸ್ ಶೋ ಪ್ರಸಾರವಾಗಲ್ಲ. ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿದ್ದ ಬಿಗ್‍ಬಾಸ್ ಶೋ ತುಂಬಾ ಜನಮನ್ನಣೆ ಗಳಿಸಿತ್ತು. ಆದರೆ ಈಗ ಬಿಗ್‍ಬಾಸ್ ಪ್ರಿಯರಿಗೆ ಇದರಿಂದ ಬೇಸರವಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್..

Spread the love ತರುಣ್ ಸುಧೀರ್ ನಿರ್ಮಾಣದ ‘ಏಳುಮಲೆ’ ಸಿನಿಮಾದ ಮೆಲೋಡಿ ಹಾಡು ರಿಲೀಸ್.. ರಾಣಾ-ಪ್ರಿಯಾಂಕಾ ಜೋಡಿಯ ಏಳುಮಲೆ ಸಿನಿಮಾದ‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ