Breaking News

ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢರ ಹೆಸರು ನಾಮಕರಣ

Spread the love

ಹುಬ್ಬಳ್ಳಿ: ನಗರದ ರೈಲು ನಿಲ್ದಾಣಕ್ಕೆ ಈ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮೀಜಿ ಅವರ ಹೆಸರು ನಾಮಕರಣ ಮಾಡಬೇಕು ಎನ್ನುವ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ.

ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈ ಕುರಿತು ಟ್ವಿಟ್ ಮಾಡಿದ್ದು, ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಸಿದ್ಧಾರೂಢ ಸ್ವಾಮೀಜಿ‌ ಎಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಗೃಹ ಸಚಿವ ಅಮಿತ್ ಶಾ ಹಾಗೂ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಎಂದು ಬರೆದಿದ್ದಾರೆ.

ನಮ್ಮೆಲ್ಲರ ಆರಾಧ್ಯ ದೈವ ಸದ್ಗುರು ಶ್ರೀ ಸಿದ್ಧಾರೂಢ ಸ್ವಾಮೀಜಿ ಅವರ ಆಶೀರ್ವಾದದಿಂದ ಹುಬ್ಬಳ್ಳಿ ಜನರ ಬಹಳ ದಿನದ ಬೇಡಿಕೆಯಂತೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಶ್ರೀ ಸಿದ್ಧಾರೂಡ ಸ್ವಾಮೀಜಿ ರೈಲ್ವೆ ನಿಲ್ದಾಣವೆಂದು ನಾಮಕರಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ನಾನು ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಪಿಯೂಷ್ ಗೋಯಲ್ ಮತ್ತು ಸುರೇಶ ಅಂಗಡಿ ಅವರಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ಫೇಸ್‌ಬುಕ್‌ನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಂತಸ ವ್ಯಕ್ತಪಡಿಸಿದ್ದಾರೆ‌.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಬಸವ ಜಯಂತಿ ಉತ್ಸವ ಪ್ರಯುಕ್ತ 19 ರಂದು “ಸಮಾನತೆಗಾಗಿ” ಬೃಹತ್ ಬೈಕ್ ರ್ಯಾಲಿ

Spread the loveಬೆಳಗಾವಿ: ಬಸವ ಜಯಂತಿ ನಿಮಿತ್ತ ಇದೆ ರವಿವಾರ ದಿನಾಂಕ 19 ರಂದು ಬೃಹತ್ ಬೈಕ್ ರ್ಯಾಲಿಯನ್ನು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ