Breaking News

‘ಗ್ರಾಮಪಂಚಾಯ್ತಿ ಡಾಟಾ ಎಂಟ್ರಿ ಆಪರೇಟರ್’ಗಳೇ ಗಮನಿಸಿ : ರಾಜ್ಯ ಸರ್ಕಾರದಿಂದ 1 ಗಂಟೆ ಕೋವಿಡ್ ಕೆಲಸ ಮಾಡುವಂತೆ ಆದೇಶ

Spread the love

ಬೆಂಗಳೂರು : ರಾಜ್ಯದ ವಿವಿಧ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು, ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಶಾಂತ್ ಸಂಬರಗಿ ವಿರುದ್ಧ ಶಾಸಕ ಜಮೀರ್ ಅಹ್ಮದ್ ದೂರು

ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ರಾಜ್ಯದ ಎಲ್ಲಾ ವಿಭಾಗಾಧಿಕಾರಿಗಳು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಿಗೆ ಪತ್ರ ಬರೆದಿದ್ದು, ಈ ಪತ್ರದಲ್ಲಿ, ರಾಜ್ಯದ ತಾಲ್ಲೂಕಿನಲ್ಲಿರುವ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಿಬ್ಬಂದಿ ಕೊರತೆ ಇದ್ದು, ಸುಗಮ ಕಾರ್ಯ ನಿರ್ವಹಣೆಗೆ ತುಂಬಾ ಕಷ್ಟಕರವಾಗಿದೆ.

ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದ ಹಾಗೂ ಆರೋಗ್ಯ ಇಲಾಖೆಯ ಇತರೆ ಕಾರ್ಯಕ್ರಮಗಳ ಬಗ್ಗೆ ದಾಖಲಾತಿ ಕೆಲಸ ನಿರ್ವಹಿಸಲು ಸಿಬ್ಬಂದಿ ಕೊರತೆ ಇದ್ದು, ಡಾಟಾ ಎಂಟ್ರಿ ಆಪರೇಟರ್ ಗಳನ್ನು ಒದಗಿಸಿಕೊಡುವ ಅಗತ್ಯವಿರುತ್ತದೆ.

ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯ್ತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಆಯಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರತಿ ದಿನ ಒಂದು ಗಂಟೆ ಕೆಲಸ ನಿರ್ವಹಿಸುವಂತೆ ಸೂಚಿಸಿದ್ದಾರೆ.

‘ಸರ್ಕಾರಿ ನೌಕರ’ರೇ ಗಮನಿಸಿ : ಇನ್ಮುಂದೆ ಬೇರೆ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲೇ NOC ಪಡೆಯುವ ಅಗತ್ಯವಿಲ್ಲ

ಇನ್ನೂ ಗ್ರಾಮ ಪಂಚಾಯ್ತಿಯಲ್ಲಿ ಅವರ ಕೆಲಸದ ವೇಳೆ ಒಂದು ಗಂಟೆ ಕಡಿತಗೊಳಿಸುವುದು. ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಳಗಳಲ್ಲಿ ಗ್ರಾಮ ಪಂಚಾಯ್ತಿ ಇಲ್ಲದಿದ್ದಲ್ಲಿ, ಪಕ್ಕದ ಗ್ರಾಮ ಪಂಚಾಯ್ತಿಯಿಂದ ಡಾಟಾ ಎಂಟ್ರಿ ಆಪರೇಟರ್ ಗಳನ್ನು ಕಳುಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದ್ದಾರೆ.

ಈ ಬಗ್ಗೆಯ ಯಾವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಯಾವ ಗ್ರಾಮ ಪಂಚಾಯ್ತಿ ಡಾಟಾ ಎಂಟ್ರಿ ಆಪರೇಟರ್ ಕೆಲಸ ನಿರ್ವಹಿಸಬೇಕು ಎಂಬ ಬಗ್ಗೆ ಆಯಾ ಜಿಲ್ಲೆಯ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು ತಕ್ಷಣ ಆದೇಶಿಸುವಂತೆ ತಿಳಿಸಿದ್ದಾರೆ.

‘ಸೋಷಿಯಲ್ ಮೀಡಿಯಾ’ಗಳಲ್ಲಿ ತಮ್ಮ ಪೋಟೋ ಬಳಸುವವರಿಗೆ ಬಿಗ್ ಶಾಕ್ ಕೊಟ್ಟ ‘ಹಾಸ್ಯನಟ ಸಾಧು ಕೋಕಿಲ’

ಹೀಗಾಗಿ ಗ್ರಾಮ ಪಂಚಾಯ್ತಿಗಳಲ್ಲಿ ಡಾಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ನಿರ್ವಹಿಸುತ್ತಿರುವ ನೌಕರರು ಇನ್ಮುಂದೆ ಒಂದು ಗಂಟೆ ತಮ್ಮ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಸಮುದಾಯ ಆರೋಗ್ಯ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್-19 ನಿರ್ವಹಣಾ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕಿದೆ.


Spread the love

About Laxminews 24x7

Check Also

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the loveಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ