Breaking News

ಕೆಪಿಎಸ್‌ಸಿಯ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ ದಿನಾಂಕ ಪ್ರಕಟ

Spread the love

ಬೆಂಗಳೂರು, : ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಇಲಾಖೆಯ ಹುದ್ದೆಗಳ ಪೂರ್ವಭಾವಿ ಹಾಗೂ ಇಲಾಖಾ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ.

ಇದೇ ತಿಂಗಳ 17ರಂದು ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ‘ಎ’ ವೃಂದದ ಸಹಾಯಕ ನಿಯಂತ್ರಕರ 54 ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ನಡೆಯಲಿದೆ.

 

ಬೆಂಗಳೂರು ಕೇಂದ್ರ ಹಾಗೂ ಆಯೋಗದ ವಿಭಾಗೀಯ ಕೇಂದ್ರಗಳಾದ ಮೈಸೂರು, ಬೆಳಗಾವಿ, ಕಲಬುರಗಿ, ಶಿವಮೊಗ್ಗದಲ್ಲಿ ಪರೀಕ್ಷೆ ನಡೆಸಲಾಗುತ್ತದೆ.

ಇನ್ನು 2020ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳು ಇದೇ ತಿಂಗಳ 18ರಿಂದ ಸೆಪ್ಟಂಬರ್ 16ರವರೆಗೆ ನಡೆಯಲಿವೆ.

ಇದೇ 24ರಂದು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 106 ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಬೆಂಗಳೂರು ಕೇಂದ್ರ, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ/ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ನಡೆಯುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ