Breaking News

ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ.

Spread the love

ಬೆಂಗಳೂರು, ಸೆ.10- ಕೇವಲ ಎರಡು ದಿನಗಳ ಮಳೆಗೆ ಸಿಲಿಕಾನ್ ಸಿಟಿ ಡ್ರೈನೇಜ್ ಸಿಟಿಯಾಗಿ ಪರಿವರ್ತನೆಗೊಂಡಿದೆ. ಮೊನ್ನೆ ಮತ್ತು ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬಿಬಿಎಂಪಿ ವ್ಯಾಪ್ತಿಯ 40ಕ್ಕೂ ಹೆಚ್ಚು ವಾರ್ಡ್‍ಗಳಲ್ಲಿ ಸಾಕಷ್ಟು ಅನಾಹುತ ಸಂಭವಿಸಿದೆ.

ಕೆಲ ಪ್ರದೇಶಗಳ ಪ್ರಮುಖ ರಸ್ತೆಗಳು ಕೊಳಚೆ ಗುಂಡಿಗಳಾಗಿ ಪರಿವರ್ತನೆಗೊಂಡಿದ್ದು , ಕೆಲವರ ಮನೆಗಳಿಗೆ ಕೊಳಚೆ ನೀರು ನುಗ್ಗಿ ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ನಾಯಂಡಹಳ್ಳಿ ಸಮೀಪ ರಾಜ ಕಾಲುವೆಗೆ ಅಡ್ಡಲಾಗಿ ನಿರ್ಮಿಸಿದ್ದ ತಡೆಗೋಡೆ ಮಳೆ ನೀರಿಗೆ ಕೊಚ್ಚಿ ಹೋದ ಪರಿಣಾಮ ರಾಜಕಾಲುವೆ ನೀರು ಪಕ್ಕದ ಪ್ರಮೋದ್ ಲೇ ಔಟ್‍ನ 25ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿತ್ತು

ಕೆಲ ಮನೆಗಳಲ್ಲಿ 5 ಅಡಿ ಎತ್ತರಕ್ಕೆ ನೀರು ನಿಂತ ಪರಿಣಾಮ ಮನೆಯಲ್ಲಿದ್ದ ಟಿವಿ, ಫ್ರಿಡ್ಜ್, ಲ್ಯಾಪ್‍ಟಾಪ್ ಮತ್ತಿತರ ಎಲೆಕ್ಟ್ರಾನಿಕ್ ಉಪಕರಣಗಳು ಹಾನಿಗೊಳಗಾದವು. ರಾಜರಾಜೇಶ್ವರಿನಗರದ ಐಡಿಯಲ್ ಹೋಮ್ಸ್, ಕೆಂಚನಹಳ್ಳಿ , ಜನಪ್ರಿಯ ಅಬೋರ್ಡ್ , ಮೈಲಸಂದ್ರ ಮತ್ತಿತರ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ.  ಮಾತ್ರವಲ್ಲ ಮಹತ್ವದ ದಾಖಲೆ ಪತ್ರಗಳು ನೀರಿನಲ್ಲಿ ಕೊಚ್ಚಿ ಹೋಗಿವೆ.

ಅನಾಹುತ ಕುರಿತಂತೆ ಬಿಬಿಎಂಪಿ ಅಧಿಕಾರಿಗಳಿಗೆ ದೂರು ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ಮನೆಯಲ್ಲಿರುವ ವಸ್ತುಗಳೆಲ್ಲಾ ಹಾನಿಯಾಗಿದೆ. ಜೀವನ ಸಾಗಿಸುವುದು ಹೇಗೆ ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ. ನಿನ್ನೆ ರಾತ್ರಿ ಸುರಿದ ಮಳೆಗೆ ಹೆಬ್ಬಾಳ , ಕೊಡಿಗೇಹಳ್ಳಿ ಹಾಗೂ ಸುತ್ತಮುತ್ತಲ ಕೆಲ ಬ್ರಿಡ್ಜ್‍ಗಳು ಜಲಾವೃತಗೊಂಡಿದ್ದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಯಿತು.

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಪರ್ಕಿಸುವ ರಸ್ತೆಯಲ್ಲಿನ ಸೇತುವೆಗಳೇ ಜಲಾವೃತಗೊಂಡಿದ್ದರಿಂದ ರಾತ್ರಿ ಇಡೀ ವಾಹನ ಸವಾರರು ಪರದಾಡುವಂತಾಯಿತು. ಕೊಡಿಗೇಹಳ್ಳಿ ಸಮೀಪ ತಿಂಡ್ಲು ಮತ್ತು ವಿದ್ಯಾರಣ್ಯಪುರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಇಷ್ಟೆಲ್ಲಾ ಅವಾಂತರಗಳಿಗೆ ಕಾರಣ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ

Spread the loveಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡಲಾಗುವುದು, AAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ