Breaking News

ಸಂಜನಾ, ಜಮೀರ್ ಸಹಾಯ ಕೇಳಿದ್ದೇಕೆ?- ಡ್ರಗ್ಸ್ ಪ್ರಕರಣದಲ್ಲಿ ರಾಹುಲ್‍ಗೆ ಬಿಜೆಪಿ ಟಾಂಗ್

Spread the love

ಬೆಂಗಳೂರು: ದೇಶದಲ್ಲಿ ಡ್ರಗ್ಸ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದೆ. ಇದೇ ವೇಳೆ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧನವಾಗಿರುವ ನಟಿ ಸಂಜನಾ ಹಾಗೂ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರಿಗೂ ಇರುವ ಸಂಬಂಧವನ್ನು ಪ್ರಶ್ನಿಸಿರುವ ಕರ್ನಾಟಕ ಬಿಜೆಪಿ, ರಾಹುಲ್ ಗಾಂಧಿ ಅವರಿಗೆ ಟಾಂಗ್ ನೀಡಿದೆ.

ಡ್ರಗ್ಸ್ ಮಾಫಿಯಾ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಕರ್ನಾಟಕ ಬಿಜೆಪಿ, ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ ನಟಿ ಸಂಜನಾ ಕಾಂಗ್ರೆಸ್ ನ ಹಿರಿಯ ನಾಯಕ, ಶಾಸಕ ಜಮೀರ್ ಅಹ್ಮದ್ ಖಾನ್ ಸಹಾಯವನ್ನು ಏಕೆ ಪಡೆದರು? ಸಂಜನಾಳೊಂದಿಗೆ ಅವರ ಸಂಬಂಧ ಏನು? ರಾಹುಲ್ ಗಾಂಧಿ ಈ ವಿಷಯದ ಬಗ್ಗೆ ತನಿಖೆಯನ್ನು ಏಕೆ ಕೇಳ್ತಿಲ್ಲ ಎಂದು ಪ್ರಶ್ನಿಸಿದೆ.ಕಾಂಗ್ರೆಸ್ ವಿರುದ್ಧ ಟ್ವೀಟ್ ವಾರ್ ಮುಂದುವರಿಸಿರುವ ಬಿಜೆಪಿ, ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬೆಳೆಯುತ್ತಿದ್ದಾಗ ಅಂದಿನ ಸಿಎಂ ಸಿದ್ದರಾಮಯ್ಯ ಬೇರೆ ಕಡೆ ಬ್ಯುಸಿಯಾಗಿದ್ದರು. ಭಯೋತ್ಪಾದಕರ ಬೆಂಬಲಿತ ಪಿಎಫ್‍ಐ, ಎಸ್‍ಡಿಪಿಐ ವಿರುದ್ಧದ ಕೇಸ್‍ಗಳನ್ನು ವಾಪಸ್ ಪಡೆಯುವಲ್ಲಿ ಹಾಗೂ ಮೂಲಭೂತವಾದಿಗಳಿಂದ ಹಿಂದೂ ಕಾರ್ಯಕರ್ತರ ಹತ್ಯೆಯನ್ನು ನೋಡುತ್ತಿದ್ದರು. ಆ ಮೂಲಕ ಓಲೈಕೆಯ ರಾಜಕಾರಣದಲ್ಲಿ ತೊಡಗಿದ್ದರು ಎಂದು ಬಿಜೆಪಿ ಆರೋಪಿಸಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ