ಮುಂಬೈ: ಜನರು ಕಂಗನಾ ರಣಾವತ್ ಅವರನ್ನು ಬೆಂಬಲಿಸುತ್ತಿರುವುದನ್ನು ಕಂಡು ತುಂಬಾ ಸಂತೋಷವಾಯಿತು. ಸತ್ಯಕ್ಕಾಗಿ ಸರ್ಕಾರವನ್ನೇ ಎದರು ಹಾಕಿಕೊಂಡು ಅವಳು ಮಾಡುತ್ತಿರುವ ಹೋರಾಟವನ್ನು ಕಂಡು ಹೆಮ್ಮೆಯಾಗುತ್ತಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಆಶಾ ರಣಾವತ್ ಹಾಗೂ ತಂದೆ ಅಮರ್‍ದೀಪ್ ರಣಾವತ್ ಭಾವುಕರಾದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಜನರು ಮಾತ್ರವಲ್ಲ ಕರ್ಣಿ ಸೇನೆ ಹಾಗೂ ಬಿಜೆಪಿ ಸೇರಿ ಹಲವು ರಾಜಕೀಯ ಪಕ್ಷಗಳು ಸಹ ಕಂಗನಾ ರಣಾವತ್ ಅವರಿಗೆ ಬೆಂಬಲ ನೀಡುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ. ಸತ್ಯಕ್ಕಾಗಿ ಹೋರಾಡುತ್ತಿರುವ ಮಗಳ ಕುರಿತು ಹೆಮ್ಮೆಯಿದೆ ಎಂದು ತಿಳಿಸಿದರು
ದಶಕಗಳಿಂದ ನಮ್ಮ ಕುಟುಂಬ ಕಾಂಗ್ರೆಸ್‍ಗೆ ಬೆಂಬಲ ನೀಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ನಮಗೆ ತುಂಬಾ ಸಹಾಯ ಮಾಡಿದ್ದಾರೆ. ಹೀಗಾಗಿ ಅವರಿಗೆ ಕೃತಜ್ಞರಾಗಿದ್ದೇವೆ. ಹೀಗಾಗಿ ನಾವು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದೇವೆ ಎಂದು ಆಶಾ ರಣಾವತ್ ಘೋಷಿಸಿದ್ದಾರೆ.
ವಿಡಿಯೋ ನೋಡಿದ ಕಂಗನಾ ರಣಾವತ್ ಅವರು ತುಂಬಾ ಭಾವಕರಾಗಿದ್ದು, ರೀಟ್ವೀಟ್ ಮಾಡಿ, ಅವರು ನನ್ನ ಕಚೇರಿ ಧ್ವಂಸಗೊಳಿಸಿದಾಗ ಅಮ್ಮನ ಎಚ್ಚರಿಕೆ ನೀಡುತ್ತಿದ್ದ ಸಂದರ್ಭ ನನ್ನ ಕಣ್ಣ ಮುಂದೆ ಬಂತು. ಅಂದಿನಿಂದ ಅವಳ ಕರೆಗಳನ್ನು ನಾನು ಸ್ವೀಕರಿಸಿರಲಿಲ್ಲ. ಇದು ನನಗೆ ಒಂದು ಕ್ಷಣ ಕಣ್ಣ ಮುಂದೆ ಬಂದು ಹೋಯಿತು. ಇಡೀ ವಿಷಯವನ್ನು ಅವರು ಕೊಂಡೊಯ್ದ ರೀತಿ ತುಂಬಾ ಆಶ್ಚರ್ಯವಾಯಿತು ಎಂದು ಟ್ವೀಟ್‍ನಲ್ಲಿ ಬರೆದುಕೊಂಡಿದ್ದಾರೆ.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
Laxmi News 24×7