Breaking News

ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ

Spread the love

ಶಿವಮೊಗ್ಗ :ಗ್ರಾಮ ಪಂಚಾಯತ್ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುತಿದ್ದ ಸಂದರ್ಭ ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹೊಸೂರು ಗ್ರಾಮ ಪಂಚಾಯತ್ ನಲ್ಲಿ ನಡೆದಿದೆ.

ಶಿಕಾರಿಪುರ ತಾಲೂಕು ಹೊಸೂರು ಗ್ರಾ.ಪಂಚಾಯತ್ ನ ಶಿವಪ್ಪ ಎಸಿಬಿ ದಾಳಿ ವೇಳೆ ಸಿಕ್ಕಿ ಬಿದ್ದಿದ್ದಾರೆ. ಶಿವಪ್ಪ ಅವರು ನರೇಗಾದ 2.10 ಲಕ್ಷ ಹಣ ಬಿಡುಗಡೆಗೆ 8 ಸಾವಿರ ರೂಪಾಯಿ ಲಂಚ ನೀಡುವಂತೆ ಗುತ್ತಿಗೆದಾರ ಮಂಜುನಾಥ ಬಳಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.ಈ ಕುರಿತು ಶಿಕಾರಿಪುರದ ಮಂಜುನಾಥ ಎಂಬುವವರು ಎಸಿಬಿ ಅಧಿಕಾರಿಗಳಿಗೆ ದೂರು ನೀಡಿದ್ದು, ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ಕಚೇರಿಗೆ ದಾಳಿ ನಡೆಸಿ ಬಂಧಿಸಿದ್ದಾರೆ.

ಡಿವೈಎಸ್ಪಿ ಲೋಕೇಶ್​ ನೇತೃತ್ವದಲ್ಲಿ ಕಾರ್ಯಾಚರಣೆ ಕೈಗೊಂಡಿದ್ದು, ಇನ್​ಸ್ಪೆಕ್ಟರ್ ತಿಪ್ಪೇಸ್ವಾಮಿ, ವಿರೇಂದ್ರ ಹಾಗೂ ಸಿಬ್ಬಂದಿ ಯೋಗೀಶ್ ಇದ್ದರು.


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ