Home / ಜಿಲ್ಲೆ / ಮೈಸೂರ್ / ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್

ಬ್ಲೂ ಫಿಲಂ ನೋಡುವವರು ಡಿಸಿಎಂ ಆಗುತ್ತಿದ್ದಾಗ ಜನರಿಗೂ ನಗು, ದುಃಖ ಆಗಿತ್ತು: ಸಾರಾ ಮಹೇಶ್

Spread the love

ಮೈಸೂರು: ಡ್ರಗ್ಸ್ ದಂಧೆ ಕುರಿತು ತನಿಖೆ ನಡೆಯುತ್ತಿರುವಾಗಲೇ ಈ ವಿಚಾರ ರಾಜಕೀಯವಾಗಿದ್ದು, ಒಬ್ಬರಿಗೊಬ್ಬರು ಕೆಸರೆರಚಾಟ ನಡೆಸಿದ್ದಾರೆ. ಇದೀಗ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಮಾಜಿ ಸಚಿವ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಕಿಡಿ ಕಾರಿರುವ ಅವರು, ಡ್ರಗ್ಸ್ ದಂಧೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‍ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್ ಆದರೂ, ಬ್ಲ್ಯೂ ಫಿಲಂ ಆದರೂ… ಎಂದು ಟಾಂಗ್ ನೀಡಿದ್ದಾರೆ.

ಡ್ರಗ್ಸ್ ದಂಧೆಕೋರರು ಸರ್ಕಾರ ಬೀಳಿಸಿದರು ಎಂದು ಈ ಹಿಂದೆ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ಈ ಕುರಿತು ಲಕ್ಷ್ಮಣ್ ಅವದಿ ಪ್ರತಿಕ್ರಿಯಿಸಿ, ಕುಮಾರಸ್ವಾಮಿಯವರ ಹೇಳಿಕೆ ಹಾಸ್ಯಾಸ್ಪದ ಎಂದಿದ್ದರು. ಇದೀಗ ಟ್ವೀಟ್ ಮೂಲಕ ಸಾರಾ ಮಹೇಶ್ ತಿರುಗೇಟು ನೀಡಿದ್ದಾರೆ.

ಡ್ರಗ್ಸ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದೇ ಕುಮಾರಸ್ವಾಮಿ, ಈ ಜಾಲದಲ್ಲಿ ಸಿಕ್ಕಿ ಬೀಳುತ್ತಿರುವವರು ಬಿಜೆಪಿಯವರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಕೂಡ ಬಾಲ ಸುಟ್ಟ ಬೆಕ್ಕಿನಂತೆ ಆಡುತ್ತಿದ್ದಾರೆ ಎಂದು ಟ್ವೀಟ್ ಮೂಲಕ ಮಾಜಿ ಸಚಿವ ಸಾರಾ ಮಹೇಶ್ ಕಿಡಿಕಾರಿದ್ದಾರೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ