Breaking News

ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ

Spread the love

ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ.

ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಎಐಸಿಸಿ ಪುನರ್ ರಚನೆಗೊಂಡಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿ ರಣದೀಪ್ ಸಿಂಗ್ ನೇಮಕಗೊಂಡಿದ್ದು, ವೇಣುಗೋಪಾಲ್ ಸ್ಥಾನಕ್ಕೆ ರಣದೀಪ್ ಸಿಂಗ್ ನೇಮಕವಾಗಿದ್ದಾರೆ.ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಹಾಗೂ ಗುಲಾಂ ನಬಿ ಅಜಾದ್ ಔಟ್ ಆಗಿದ್ದಾರೆ.

ಹೆಚ್ ಕೆ ಪಾಟೀಲ್ ಗೆ ಮಹಾರಾಷ್ಟ್ರ ಉಸ್ತುವಾರಿ ಜವಾಬ್ದಾರಿ ನೀಡಿದ್ರೆ, ದಿನೇಶ್ ಗುಂಡೂರಾವ್ ಗೆ ಪುದುಚೇರಿ, ತಮಿಳುನಾಡು ಹಾಗೂ ಗೋವಾ ರಾಜ್ಯಗಳ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ