Breaking News

ಸಿಕ್ಕಾಕೊಂಡ್ರರೆ ನಾವು ಮತ್ತೆ ಜೈಲಿಗೆ ಹೋಗ್ಬೇಕಾಗುತ್ತೆ-

Spread the love

ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ರಾಗಿಣಿಯನ್ನು ಮತ್ತೆ ಕಸ್ಟಡಿಗೆ ನೀಡಲು ವೈದ್ಯಕೀಯ ಪರೀಕ್ಷೆ ನಡೆಸುವ ವೇಳೆ ಅವರು ಮಾಡಿದ ಕಿರಿಕ್ ಕಾರಣ ಎನ್ನಲಾಗಿದೆ.

ವಿಚಾರಣೆ ಸಂದರ್ಭದಲ್ಲಿ ಪದೇ ಪದೇ ಅನಾರೋಗ್ಯ ನೆಪವೊಡ್ಡುತ್ತಿದ್ದ ಅವರ ಆರೋಗ್ಯ ತಪಾಸಣೆ ನಡೆಸಲು ನಗರದ ಕೆಸಿ ಜನರಲ್ ಆಸ್ಪತ್ರೆಗೆ ಕರೆತರಲಾಗಿತ್ತು. ಆ ಬಳಿಕ ಅವರನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ನ್ಯಾಯಾಲಯದ ಅನುಮತಿ ಪಡೆದು ರಾಗಿಣಿ ಅವರಿಗೆ ಡೋಪಿಂಗ್ ಪರೀಕ್ಷೆ ನಡೆಸಲು ಮುಂದಾಗಿದ್ದರು. ಆದರೆ ಈ ವೇಳೆ ಅಧಿಕಾರಿಗಳ ವಿರುದ್ಧವೇ ಗರಂ ಆದ ನಟಿ ವೈದ್ಯಕೀಯ ಪರೀಕ್ಷೆ ನಡೆಸಿಕೊಳ್ಳಲು ನಿರಾಕರಿಸಿದ್ದರು. ಈ ಕುರಿತ ವಿಡಿಯೋ ಸದ್ಯ ವೈರಲ್ ಆಗಿದೆ.

ವಿಡಿಯೋದಲ್ಲಿ ಅಧಿಕಾರಿಗಳ ಗಲಾಟೆ ಮಾಡಿದ್ದು, ನಮ್ಮ ಲೈಫ್ ಈಗಾಗಲೇ ಹಾಳಾಗಿ ಹೋಗಿದೆ. ನೀವು ಬಂದನ ಮಾಡಿದ ಕಾರಣ ನಮ್ಮ ಮರ್ಯಾದೆ ಹೋಗಿದೆ. ಮೊದಲೇ ನಮ್ಮ ಲೈಪ್ ಬರ್ನ್ ಆಗಿದೆ. ಇದರಲ್ಲಿ ಸಿಕ್ಕಿಹಾಕ್ಕೋಂಡ್ರೆ ಜೈಲಿಗೆ ಹೋಗಬೇಕಾಗುತ್ತೆ ಎಂದು ಪರೀಕ್ಷೆ ಮಾಡಿಸಿಕೊಳ್ಳುವ ವಿಚಾರದಲ್ಲಿ ಹಠ ಮಾಡಿದ್ದರು. ಯಾವುದೇ ಟೆಸ್ಟ್ ಮಾಡೋದಿದ್ದರೂ ನಮ್ಮ ವಕೀಲರು ಬರಲಿ ಎಂದು ಹೇಳಿದ್ದರು. ಸದ್ಯ ಈ ವಿಡಿಯೊ ವೈರಲ್ ಆಗಿದೆ.ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರ್ ಪಡಿಸಿದ್ದರು. ಈ ವೇಳೆ ವಿಚಾರಣೆಯನ್ನು ಮುಂದುವರಿಸಲು ಮತ್ತೆ 6 ದಿನ ಪೊಲೀಸ್ ಕಸ್ಟಡಿಗೆ ನೀಡಲು ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು….


Spread the love

About Laxminews 24x7

Check Also

ಬಾಲಕಿ ಜೊತೆ ಅನುಚಿತ ವರ್ತನೆ, ದೂರು ದಾಖಲು – ಮಲ್ಲಿಕಾರ್ಜುನ ಮುತ್ಯಾಗೆ ಸಂಕಷ್ಟ

Spread the loveಬೆಂಗಳೂರು: ಅಪ್ರಾಪ್ತೆಯ  ಜೊತೆ ಮಲ್ಲಿಕಾರ್ಜುನ ಮುತ್ಯಾ  ಅನುಚಿತ ವರ್ತನೆ ತೋರಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ