Breaking News

ಇಂದಿನಿಂದ ಬೆಂಗಳೂರಲ್ಲಿ ಬೀದಿಬದಿ ಹಣ್ಣು-ಚಾಟ್ಸ್​ ವ್ಯಾಪಾರ ನಡೆಸುವಂತಿಲ್ಲ: ಸಿಎಂ ಖಡಕ್ ಸೂಚನೆ

Spread the love

ಇಂದಿನಿಂದ ಬೆಂಗಳೂರಲ್ಲಿ ಬೀದಿಬದಿ ಹಣ್ಣು-ಚಾಟ್ಸ್​ ವ್ಯಾಪಾರ ನಡೆಸುವಂತಿಲ್ಲ: ಸಿಎಂ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹಾಗೂ ಕಾಲರಾ ಭೀತಿ ಹೆಚ್ಚಾಗಿರುವ ಹಿನ್ನೆಲೆ ಇಂದಿನಿಂದ ಬೆಂಗಳೂರಿನಲ್ಲಿ ಯಾವುದೇ ಬೀದಿಬದಿ ವ್ಯಾಪಾರಿಗಳು ವ್ಯಾಪಾರ ನಡೆಸಬಾರದೆಂದು ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ ಕೊಟ್ಟಿದ್ದಾರೆ.

ಬಿಬಿಎಂಪಿ ಮೇಯರ್ ಗೌತಮ್‌ ಕುಮಾರ್, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಮಂಜುನಾಥ್‌ ರಾಜು, ಆಡಳಿತ ಪಕ್ಷದ ನಾಯಕ ಮುನೀಂದ್ರಕುಮಾರ್‌ ಹಾಗೂ ಆಯುಕ್ತ ಅನಿಲ್‌ ಕುಮಾರ್‌ಗೆ ಸಿಎಂ ಕರೆ ಮಾಡಿ ಈ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇಂದಿನಿಂದ ಎಲ್ಲಾ 198 ವಾರ್ಡ್‌ಗಳಲ್ಲೂ ಬೀದಿಬದಿಯ ವ್ಯಾಪಾರಗಳು ಸ್ಥಗಿತಗೊಳ್ಳಬೇಕು. ಸರ್ಕಾರ ಮುಂದಿನ ಆದೇಶ ನೀಡುವವರೆಗೂ ಯಾವುದೇ ರಸ್ತೆಯಲ್ಲೂ ಹಣ್ಣು, ತರಕಾರಿಗಳು, ಚಾಟ್ ಸೆಂಟರ್‌ಗಳು ಹಾಗೂ ತಳ್ಳುವ ಗಾಡಿಯಲ್ಲಿ ಮಾರಾಟವಾಗುವ ಆಹಾರ ಪದಾರ್ಥಗಳು ಕಾಣಿಸಬಾರದು. ಪಾಲಿಕೆಯ ವತಿಯಿಂದ ಕೊರೊನಾ ವೈರಸ್‌ ಬಗ್ಗೆ ಜಾಗೃತಿ ಮೂಡಿಸುವ ಕೆಲಸವಾಗಬೇಕು ಅಂತ ಆದೇಶಿಸಿದ್ದಾರೆ. ಇದರ ಜೊತೆಗೆ ಫುಡ್ ಸ್ಟ್ರೀಟ್‌ಗಳ ಮೇಲೂ ಹದ್ದಿನ ಕಣ್ಣಿಡಬೇಕು ಎಂದು ಸೂಚನೆ ಕೊಟ್ಟಿದ್ದಾರೆ.

ಕೊರೊನಾ ವೈರಸ್‌ ಜಾಗೃತಿಗೆ ಪ್ರತಿ ವಾರ್ಡ್‌ನ ಪಾಲಿಕೆ  ಸದಸ್ಯರು ಕೈಜೋಡಿಸಬೇಕು. ನಗರದ ಹೊರವಲಯದಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಕಾಲಾರಾ ಮಹಾಮಾರಿ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು. ನಗರದ ವಾಣಿವಿಲಾಸ್, ನಿಮ್ಹಾನ್ಸ್, ರಾಜೀವ್‌ಗಾಂಧಿ ಆಸ್ಪತ್ರೆ ಸೇರಿದಂತೆ ಪಾಲಿಕೆಗೆ ಸೇರಿರುವ ಆಸ್ಪತ್ರೆಗಳಲ್ಲೂ ಪ್ರಥಮ ಚಿಕಿತ್ಸೆಗೆ ಬೇಕಾಗಿರುವ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದ್ದಾರೆ.

ಸಿಎಂ ಯಡಿಯೂರಪ್ಪರ ಮಾತಿನ ಮೇರೆಗೆ ಪಾಲಿಕೆ ವ್ಯಾಪ್ತಿಯ ಎಲ್ಲಾ ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಲು ಮೇಯರ್, ಆಡಳಿತ ಪಕ್ಷದ ನಾಯಕ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಆಯುಕ್ತರು ಮುಂದಾಗಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ