Breaking News

ಉಸಿರಾಟದ ತೊಂದರೆ – ಮತ್ತೆ ಆಸ್ಪತ್ರೆ ಸೇರಿದ ಅಮಿತ್ ಶಾ………..

Spread the love

ನವದೆಹಲಿ: ಉಸಿರಾಟದ ತೊಂದರೆ ಕಾಣಿಸಿಕೊಂಡ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮತ್ತೆ ದೆಹಲಿ ಏಮ್ಸ್ ಆಸ್ಪತ್ರೆ ದಾಖಲಾಗಿದ್ದಾರೆ.

ಅಮಿತ್ ಶಾ ಅವರು ಇತ್ತೀಚೆಗಷ್ಟೇ ಕೊರೊನಾದಿಂದ ಗುಣಮುಖರಾಗಿ ಬಂದಿದ್ದರು. ಆದರೆ ಮತ್ತೆ ಅವರಿಗೆ ಉಸಿರಾಟ ತೊಂದರೆ ಕಾಣಿಸಿಕೊಂಡ ಕಾರಣ ಶನಿವಾರ ರಾತ್ರಿ 11 ಗಂಟೆಗೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಕೊರೊನಾ ಬಂದ ಕಾರಣ ಅವರು ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು.

ಅಮಿತ್ ಶಾ ಅವರಿಗೆ ಆಗಸ್ಟ್ 2ರಂದು ಕೊರೊನಾ ಪಾಸಿಟಿವ್ ಬಂದಿತ್ತು. ಇದನ್ನು ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದ ಅಮಿತ್ ಶಾ, ನನಗೆ ಕೊರೊನಾ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದರು. ಈ ನಂತರ ಅವರಿಗೆ ಅಗಸ್ಟ್ 14ರಂದು ಕೊರೊನಾ ಬರದಿ ನೆಗೆಟಿವ್ ಬಂದಿತ್ತು. ಆದ ಕಾರಣ ಮತ್ತೆ ಟ್ವೀಟ್ ಮಾಡಿದ್ದ ಅಮಿತ್ ಶಾ ನನಗೆ ಕೊರೊನಾ ವರದಿ ನೆಗೆಟಿವ್ ಬಂದ ಕಾರಣ ಹೋಂ ಐಸೊಲೇಶನ್‍ನಲ್ಲಿ ಇರಲಿದ್ದೇನೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು.

ಇದಾದ ಬಳಿಕ ಅಗಸ್ಟ್ 18ರಂದು ಮಧ್ಯ ರಾತ್ರಿ ಮತ್ತೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಗ್ಗೆ ಅಂದು ಪತ್ರಿಕಾ ಪ್ರಕಟನೆ ಹೊರಡಿಸಿದ್ದ ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ, ಅಮಿತ್ ಶಾ ಅವರಿಗೆ ಕಳೆದ 3-4 ದಿನಗಳಿಂದ ಮೈ-ಕೈ ನೋವು, ಸುಸ್ತು ಕಾಣಿಸಿಕೊಂಡ ಹಿನ್ನೆಲೆ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರ ಕೊರೊನಾ ವರದಿ ನೆಗೆಟಿವ್ ಬಂದಿದ್ದು, ಏಮ್ಸ್ ಆಸ್ಪತ್ರೆಯ ಪೋಸ್ಟ್ ಕೋವಿಡ್ ಕೇರ್ ಗೆ ದಾಖಲಿಸಿಕೊಳ್ಳಲಾಗಿದೆ. ಅವರು ಆರಾಮಾಗಿದ್ದು, ಆಸ್ಪತ್ರೆಯಿಂದಲೇ ಕೆಲಸ ಮಾಡಲಿದ್ದಾರೆ ಎಂದು ತಿಳಿಸಲಾಗಿತ್ತು.


Spread the love

About Laxminews 24x7

Check Also

ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ ಸಸಿ ನೆಟ್ಟ ಮಕ್ಕಳು

Spread the love ಪರಿಸರ ದಿನಾಚರಣೆ ಮುನ್ನಾ ದಿನ ಅರಣ್ಯ ಪ್ರದೇಶದಲ್ಲಿ ಮಕ್ಕಳ ಸಂಭ್ರಮ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ