Breaking News

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌

Spread the love

ರಾಮನಗರ:   ಜಿಲ್ಲೆಯ ಮುಗ್ಗೂರು ಮತ್ತು ಹನೂರು ಅರಣ್ಯ ವಲಯದಲ್ಲಿರುವ ಒಂಟಿಗುಂಡುವಿನ ಬಳಿ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಾಣ ಮಾಡಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರ ಅನುಮತಿ ನೀಡಿದ ಕೂಡಲೇ ಯೋಜನೆ‌ ಪ್ರಾರಂಭಿಸಲಾಗುವುದು‌ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದರು.

ಮೇಕೆದಾಟು ಯೋಜನಾ ಪ್ರದೇಶಕ್ಕೆ‌ ಭೇಟಿ‌ ನೀಡಿ, ಸ್ಥಳ ಪರಿಶೀಲನೆ ಮಾಡಿದ ಸಚಿವರು, ಅಣೆಕಟ್ಟು ನಿರ್ಮಾಣ ಸಂಬಂಧ ಕೇಂದ್ರದ ಜಲಶಕ್ತಿ ಸಚಿವಾಲಯ ಈಗಾಗಲೇ ಅನುಮತಿ ನೀಡಿದೆ.   ಪರಿಸರ ಮತ್ತು ಅರಣ್ಯ ಇಲಾಖೆಗಳ ಅನುಮತಿಗಾಗಿ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

 


ಮೇಕೆದಾಟು ಅಣೆಕಟ್ಟನ್ನು 9000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದೆ. ವಾಸ್ತವ ಅಂಶಗಳ ಮನವರಿಕೆಗಾಗಿ ಮತ್ತು ತ್ವರಿತ ಅನುಮೋದನೆಗೆ ಕೇಂದ್ರ ಸರ್ಕಾರದ ಮೇಲೆ‌ ಒತ್ತಡ ಹೇರುವ ದೃಷ್ಟಿಯಿಂದ ದೆಹಲಿಗೆ ತೆರಳುವುದಾಗಿ ಸಚಿವರು ಹೇಳಿದರು.

ಸಭೆಯಲ್ಲಿ ಎಂ ಎಲ್ ಸಿ ಸಿಪಿ ಯೋಗೇಶ್ವರ್, ಕಾವೇರಿ ನೀರಾವರಿ ನಿಗಮದ ಎಂಡಿ ಜೈಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ ಕಾಲೇಜು ಸೇರಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ

Spread the love ವಿಜಯಪುರ ಜಿಲ್ಲೆಯ ಅಭಿವೃದ್ಧಿಯ ಕನಸು ನನಸು ಮಾಡಲು ಬದ್ಧ ಎಂದ ಸಿಎಂ; ಯುಕೆಪಿ, ಸರ್ಕಾರಿ ಮೆಡಿಕಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ