ಹುಬ್ಬಳ್ಳಿ: ಗ್ರಾಹಕರ ಸೋಗಿನಲ್ಲಿ ಬೆಳಗಾವಿ, ಹುಬ್ಬಳ್ಳಿ, ದಾವಣಗೆರೆಯ ಕಲ್ಯಾಣ ಜ್ಯುವೆಲರಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಒಡವೆಗಳನ್ನು ಕದ್ದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ವಿಜಯನಗರದದ ನಿವಾಸಿ ವಿರಕ್ತಾನಂದ ಅಲಿಯಾಸ್ ಸಂತೋಷ್ ಮಹದೇವಪ್ಪ ಕಟಗಿ, ಗದಗದ ಶರತ್ ಶ್ರೀಕಾಂತ್ ಕಾರಂತ ಬಂಧಿತರು.
ಪೊಲೀರು ಬಂಧಿತರಿಂದ 8 ಲಕ್ಷ 27 ಸಾವಿರ ಮೌಲ್ಯದ 130.681 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿ ಅಂಗಡಿಯೊಂದರಲ್ಲಿ ಗ್ರಾಹಕರಂತೆ ಚಿನ್ನಾಭರಣ ಖರೀದಿಗೆಂದು ಬಂದು ಸಿಬ್ಬಂದಿಗೆ ಗೊತ್ತಾಗದಂತೆ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು.
ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಆರೋಪಿಗಳು ಸಿಕ್ಕಿ ಹಾಕಿಕೊಂಡಿದ್ದಾರೆ. ಪ್ರಮುಖ ಆರೋಪಿ ಮಹೇಶ್ ಬಾಣದ ತಲೆ ಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Laxmi News 24×7