Breaking News

ರಾಗಿಣಿ ಸೇರಿ 6 ಮಂದಿಗೆ 14 ದಿನ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

Spread the love

ಬೆಂಗಳೂರು,ಸೆ.14- ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿರುವ ಸ್ಯಾಂಡಲ್‍ವುಡ್ ನಟಿ ರಾಗಿಣಿ ದ್ವಿವೇದಿ ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು ಪರಪ್ಪನ ಅಗ್ರಹಾರ ಜೈಲಿಗೆ ಹೋಗಬೇಕಾಗಿದೆ.

ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಲುಕಿ ಸಿಸಿಬಿ ವಶದಲ್ಲಿರುವ ರಾಗಿಣಿ ಅವರ 12 ದಿನದ ಹಾಗೂ ಸಂಜನಾ ಅವರ ಒಂದು ವಾರದ ಪೊಲೀಸ್ ಕಸ್ಟಡಿ ಅವಧಿ ಮುಗಿದಿದ್ದು, ಈ ಇಬ್ಬರನ್ನು ಕೆಸಿಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರಿಪಡಿಸಲಾಯಿತು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ ನ್ಯಾಯಾಧೀಶರು ಈ ಇಬ್ಬರು ನಟಿಯ  ಸೇರಿ 6 ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ನಂತರ ಅವರನ್ನು ಅಲ್ಲಿಂದ ಮಹಿಳಾ ಸಾಂತ್ವಾನ ಕೇಂದ್ರಕ್ಕೆ ಕರೆತರಲಾಯಿತು. ಇಂದು ಮಧ್ಯಾಹ್ನ ಅವರ ಅರ್ಜಿ ವಿಚಾರಣೆ ನಡೆಯಿತು. ಪೊಲೀಸಲು ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್, ವಿರೇನ್ ಖನ್ನಾ, ರವಿಶಂಕರ್ ಸೇರಿದಂತೆ 6 ಮಂದಿ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಯಿತು.

ಈ ಮಧ್ಯೆ ರಾಗಿಣಿ ಅವರು ಎನ್‍ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಯಾಗಿದೆ.

ಈ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಪೊಲೀಸರು ಒಂದು ವಾರ ಕಾಲಾವಕಾಶ ಕೇಳಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ