Breaking News

ಬೆಳಗಾವಿ: ಸರ್ಕಾರಿ ವೈದ್ಯರ ಪ್ರತಿಭಟನೆ

Spread the love

ಬೆಳಗಾವಿ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

‘ಸೆ.21ರವರೆಗೆ ಸರ್ಕಾರಕ್ಕೆ ಯಾವುದೇ ವರದಿ ನೀಡದೆ ಕಾರ್ಯನಿರ್ವಹಿಸುತ್ತೇವೆ’ ಎಂದು ತಿಳಿಸಿದರು.

‘ಆರೋಗ್ಯ ಇಲಾಖೆ ಕಾರ್ಯಕ್ರಮಗಳ ಅನುಷ್ಠಾನ ವಿಷಯದಲ್ಲಿ ಸರ್ಕಾರಕ್ಕೆ ವರದಿ ನೀಡುವುದನ್ನು ಸ್ಥಗಿತಗೊಳಿಸುತ್ತೇವೆ. ಸೆ. 21ರಿಂದ ತುರ್ತು ಸೇವೆಗಳನ್ನು ಹೊರತುಪಡಿಸಿ ಉಳಿದೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ಹೋರಾಟ ಮುಂದುವರಿಸಲಾಗುವುದು. ಬಳಿಕವೂ ಸ್ಪಂದಿಸದಿದ್ದಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರವು ವೈದ್ಯರನ್ನು ನಿರ್ಲಕ್ಷಿಸುತ್ತಿದೆ.

ರೋಗ ತಡೆಯಿಂದ ಹಿಡಿದು ಚಿಕಿತ್ಸೆವರೆಗೂ ಎಲ್ಲ ಹಂತಗಳಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದರೂ ಆರೋಗ್ಯ ಇಲಾಖೆಯ ಬಗ್ಗೆ ಸರ್ಕಾರ ಕಾಳಜಿ ತೋರುತ್ತಿಲ್ಲ’ ಎಂದು ದೂರಿದರು.

ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ಸಂಜಯ ಡುಮ್ಮಗೋಳ ನೇತೃತ್ವ ವಹಿಸಿದ್ದರು.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ

Spread the love ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆ ‌ಅವ್ಯವಸ್ಥೆ ಕಂಡು ಗರಂ ಆದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚಿಕ್ಕೋಡಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ