Breaking News

14 ‘ಕನ್ನಡ ಭಾಷಾ ದಿನ’ವೆಂದು ಆಚರಿಸಲು ಒತ್ತಾಯ

Spread the love

ಬೆಳಗಾವಿ: ’14ರಂದು ಹಿಂದಿ ದಿವಸ್‌ಗೆ ಪರ್ಯಾಯವಾಗಿ ಅಂತರರಾಷ್ಟ್ರೀಯ ಕನ್ನಡ ಭಾಷಾ ದಿನವೆಂದು ಆಚರಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಇಲ್ಲಿನ ಕೇಂದ್ರ ಅಂಚೆ ಕಚೇರಿ ಬಳಿ ಸೋಮವಾರ ಪ್ರತಿಭಟನೆ ನಡೆಸಿದರು.

ಕನ್ನಡ ದಿನ ಆಚರಿಸುವಂತೆ ಕಚೇರಿ ಗೋಡೆಗಳಿಗೆ ಭಿತ್ತಿಪತ್ರಗಳನ್ನು ಅಂಟಿಸಿದರು. ಅಂಚೆ ಇಲಾಖೆ ಅಧಿಕಾರಿಗಳಿಗೆ ಸಿಹಿ ವಿತರಿಸಿದರು.

‘ರಾಷ್ಟ್ರೀಕೃತ ಬ್ಯಾಂಕ್‌, ಅಂಚೆ ಕಚೇರಿ ಹಾಗೂ ರೈಲು ನಿಲ್ದಾಣಗಳಲ್ಲಿನ ಅಧಿಕಾರಿಗಳು ಮತ್ತು ಸಿಬ್ಬಂದಿ ಆಡಳಿತದಲ್ಲಿ ಕನ್ನಡವನ್ನು ಬಳಸಬೇಕು. ಈ ರಾಜ್ಯದ ಸವಲತ್ತುಗಳನ್ನು ಪಡೆದು ಅನ್ಯ ಭಾಷೆಗಳ ಬಳಕೆಗೆ ಉತ್ತೇಜನ ನೀಡಬಾರದು. ಈ ಎಲ್ಲ ಕಚೇರಿಗಳಲ್ಲೂ ಕನ್ನಡ ಭಾಷಾ ದಿನವನ್ನು ಆಚರಿಸಬೇಕು’ ಎಂದು ಒತ್ತಾಯಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಬಾಬು ಸಂಗೋಡಿ, ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಾ ಯಾದವಾಡ ನೇತೃತ್ವ ವಹಿಸಿದ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ