Breaking News

ಜಿಐಟಿ ಎಂಬಿಎ ವಿಭಾಗದ ವಾರ್ಷಿಕೋತ್ಸವ

Spread the love

ಬೆಳಗಾವಿ: ಇಲ್ಲಿನ ಕೆಎಲ್‌ಎಸ್‌ ಗೋಗಟೆ ತಾಂತ್ರಿಕ ಕಾಲೇಜಿನ ಎಂಬಿಎ ವಿಭಾಗದಿಂದ ಆನ್‌ಲೈನ್ ಮೂಲಕ ವಾರ್ಷಿಕ ದಿನ ಆಚರಿಸಲಾಯಿತು.

ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಮಾತನಾಡಿ, ‘ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಕರು ಸಮಾಜಕ್ಕೆ ನಿಷ್ಠರಾಗಿರಬೇಕು. ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಡುವಿನ ಸಂಬಂಧವು ದೀರ್ಘಕಾಲದ್ದಾಗಿರುತ್ತದೆ. ಯಾವುದೇ ಶಿಕ್ಷಣ ಸಂಸ್ಥೆಗೆ ಅವರೇ ನಿಜವಾದ ಬ್ರಾಂಡ್ ಅಂಬಾಸಿಡರ್‌ಗಳಾಗಿರುತ್ತಾರೆ’ ಎಂದರು.

ಪ್ರಾಂಶುಪಾಲ ಡಾ.ಜಯಂತ್ ಕೆ. ಕಿತ್ತೂರ ಅಧ್ಯಕ್ಷತೆ ವಹಿಸಿದ್ದರು. ಎಂಬಿಎ ವಿಭಾಗದ ಡೀನ್ ಡಾ.ಕೃಷ್ಣ ಶೇಖರ್ ಲಾಲ್‌ದಾಸ್ ವಾರ್ಷಿಕ ವರದಿ ಮಂಡಿಸಿದರು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ವ್ಯವಸ್ಥಾಪಕ, ಮಾರುಕಟ್ಟೆ ವ್ಯವಸ್ಥಾಪಕ, ಹಣಕಾಸು ವ್ಯವಸ್ಥಾಪಕ, ಮಾನವ ಸಂಪನ್ಮೂಲ ಹಾಗೂ ಈವೆಂಟ್ ವ್ಯವಸ್ಥಾಪಕ ಪ್ರಶಸ್ತಿಗಳನ್ನು ನೀಡಲಾಯಿತು.

ಪಿ. ಮೆಹ್ತಾ ಮತ್ತು ಸೋನಮ್ ಸಂಯೋಜಿಸಿದರು. ಪ್ರೊ.ಜೋತಿ ತಲ್ರೆಜಾ ನಿರೂಪಿಸಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ