Breaking News

ಬೀದಿ ನಾಟಕ ಆರಂಭಿಸಲು ಕಲಾವಿದರ ಮನವಿ

Spread the love

ಬೆಳಗಾವಿ: ‘ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಲಾವಿದರಿಗೆ ಅನುಕೂಲ ಕಲ್ಪಿಸಲು, ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸುವ ಯೋಜನೆಗಳ ಜನ ಜಾಗೃತಿಗೆ ಬೀದಿ ನಾಟಕ ಕಾರ್ಯಕ್ರಮಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ಬೀದಿ ನಾಟಕ ಕಲಾ ತಂಡಗಳ ಒಕ್ಕೂಟದ ಜಿಲ್ಲಾ ಘಟಕದವರು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಹಾಗೂ ವಾರ್ತಾ ಇಲಾಖೆ ಉಪನಿರ್ದೇಶಕ ಗುರುನಾಥ ಕಡಬೂರ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

 

‘ರಾಜ್ಯದ 4,500 ಕಲಾವಿದರನ್ನು ದಶಕಗಳಿಂದಲೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿವಿಧ ಇಲಾಖೆಗಳ ಯೋಜನೆಗಳ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಲು ಬಳಸಿಕೊಳ್ಳಲಾಗುತ್ತಿತ್ತು. ಬೀದಿ ನಾಟಕ ಕಲೆಯನ್ನು ಅವಲಂಬಿಸಿ ಬದುಕು ಕಟ್ಟಿಕೊಂಡಿದ್ದೆವು. ಆದರೆ, ಸದ್ಯ ಕೆಲವು ಇಲಾಖೆಗಳು ಅಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದನ್ನೇ ನಿಲ್ಲಿಸಿವೆ.

ಇದರಿಂದ ನಾವು ಸಂಕಷ್ಟಕ್ಕೆ ಒಳಗಾಗಿದ್ದೇವೆ. ಕೊರೊನಾ ವೈರಸ್ ಸಂದರ್ಭದಲ್ಲಿ ಕೆಲಸವಿಲ್ಲದೆ ಜೀವನ ನಿರ್ವಹಣೆಯೇ ಕಷ್ಟವಾಗಿದೆ’ ಎಂದು ಅಳಲು ತೋಡಿಕೊಂಡರು.

‘ಬೀದಿ ನಾಟಕ ಕಾರ್ಯಕ್ರಮಗಳನ್ನು ಕೂಡಲೇ ಆರಂಭಿಸಬೇಕು. ಇದಕ್ಕಾಗಿಯೇ ಪ್ರತ್ಯೇಕ ಅಕಾಡೆಮಿ ಸ್ಥಾಪಿಸಬೇಕು’ ಎಂದು ಒತ್ತಾಯಿಸಿದರು.

ಘಟಕದ ಭರತ ಕಲಾಚಂದ್ರ, ರಾಮಚಂದ್ರ ಕಾಂಬಳೆ, ಮಾರುತಿ ಕಾಮಗೌಡ, ಮಿಲೀಂದ್ರ ಸಂಗಣ್ಣವರ, ಪ್ರಶಾಂತ ಕಾಬಂಳೆ, ಸುಜಾತಾ ಮಗದುಮ್ಮ, ಸಾವಿತ್ರಿ ಹಳಕಲ್ಲ, ಮಾರುತಿ ಕಮತೆ ಇದ್ದರು.


Spread the love

About Laxminews 24x7

Check Also

ಹೋಟೆಲ್‌ಗಳಿಗೆ 10 ದಿನ ಗ್ಯಾಸ್ ಸಮಸ್ಯೆ ಆಗುತ್ತೆ, ಸಹಿಸಿಕೊಳ್ಳಬೇಕು: ಮುನಿಯಪ್ಪ

Spread the loveಬೆಂಗಳೂರು: ಹೋಟೆಲ್‌ಗಳಿಗೆ ಕಮರ್ಷಿಯಲ್ ಗ್ಯಾಸ್ ಒಂದು ವಾರ, 10 ದಿನ ಸಮಸ್ಯೆ ಆಗಬಹುದು. ಅಲ್ಲಿವರೆಗೂ ಹೋಟೆಲ್‌ಗಳು ಸಹಿಸಿಕೊಳ್ಳಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ