Breaking News

ಪ್ರಧಾನಿ ಮೋದಿ ಹುಟ್ಟು ಹಬ್ಬಕ್ಕೆ ವಿಶ್ವದ ನಾನಾ ಕಡೆಯಿಂದ ಶುಭಾಶಯದ ಮಹಾಪೂರ

Spread the love

ನವದೆಹಲಿ: ಇಂದು ಪ್ರಧಾನಿ ಮೋದಿಯವರು ತಮ್ಮ 70ವರ್ಷದ ಹುಟ್ಟು ಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಈ ನಡುವೆ ದೇಶ-ವಿದೇಶಗಳಿಂದ ಜನಸಾಮಾನ್ಯರು ಹಾಗೂ ಗಣ್ಯರು ಶುಭಾಶಯಗಳನ್ನು ಕೋರುತ್ತಿದ್ದಾರೆ.

ಇನ್ನೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಶುಭಾಶಯಗಳನ್ನು ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್‌ ಮಾಡಿರುವ ರಾಹುಲ್‌ ಗಾಂಧಿ ಮೋದಿ ಜಿ ಅವರಿಗೆ ಜನ್ಮದಿನದ ಶುಭಾಶಯಗಳು ಅಂತ ಹೇಳಿದ್ದಾರೆ.
ಪ್ರಧಾನಿ ಮೋದಿಯವರ ಜನ್ಮದಿನವನ್ನು ಆಚರಿಸಲು ಬಿಜೆಪಿ ದೇಶಾದ್ಯಂತ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದೆ. ಈ ಸಂದರ್ಭವನ್ನು ಆಚರಿಸಲು 70 ಕೆಜಿ ಲಡ್ಡು ಸಹ ಸಿದ್ಧಪಡಿಸಲಾಗಿದೆ.

ವಡೋದರಾದಲ್ಲಿ, ಪ್ರಧಾನ್ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಅಡಿಯಲ್ಲಿ ಪಕ್ಷವು 20,000 ಕ್ಕೂ ಹೆಚ್ಚು ಜನರಿಗೆ ಜೀವ ವಿಮೆಯನ್ನು ನೀಡಿದೆ.

ಪ್ರಧಾನಿ ಅವರ ಜನ್ಮದಿನದಂದು ಸೆಪ್ಟೆಂಬರ್ 14 ರಿಂದ 20 ರವರೆಗೆ ಬಿಜೆಪಿ ಸೇವಾ ಸಪ್ತ ಆಯೋಜಿಸಿದೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ