Breaking News

ಬಿಎಸ್‌ವೈ ಇಂದು ದೆಹಲಿಗೆ

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ.

ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್ ಅವರ ಜತೆ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸಚಿವರನ್ನು ಭೇಟಿ ಮಾಡಿ ರಾಜ್ಯಕ್ಕೆ ಸಂಬಂಧಿಸಿದ ಹಲವು ಯೋಜನೆಗಳು, ಜಿಎಸ್‌ಟಿ ಪರಿಹಾರ ನೀಡುವಂತೆ ಹಣಕಾಸು ಸಚಿವರನ್ನು ಒತ್ತಾಯಿಸುವ ಸಾಧ್ಯತೆ ಇದೆ.

ಪ್ರಧಾನಿ ಮೋದಿಯವರ ಭೇಟಿಗೂ ಪ್ರಯತ್ನಿಸಲಿದ್ದಾರೆ ಎಂದು ಮೂಲಗಳು ಹೇಳಿವೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ!

Spread the love ನುಡಿದಂತೆ ನಡೆದ ಎಂಎಲ್ಸಿ ಪ್ರಕಾಶ ಹುಕ್ಕೇರಿ: ಯಡೂರ ಗ್ರಾಮಸ್ಥರ ಮೆಚ್ಚುಗೆ! ನುಡಿದಂತೆ ನಡೆದ ಪ್ರಕಾಶ ಹುಕ್ಕೇರಿ; …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ