ಬೆಳಗಾವಿ: ಇಲ್ಲಿನ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನ ಆಚರಿಸಲಾಯಿತು.

ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಎಸ್.ಜಿ. ಬಾಳೇಕುಂದ್ರಿ ಅವರ ಫೋಟೊಗಳಿಗೆ ಪೂಜೆ ಸಲ್ಲಿಸಲಾಯಿತು.
ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ವಿಶ್ವೇಶ್ವರಯ್ಯ ಹಾಗೂ ಬಾಳೇಕುಂದ್ರಿ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು. ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಬಳಿಕ ವೆಬಿನಾರ್ ಆಯೋಜಿಸಲಾಗಿತ್ತು. ಸೆಲ್ಕೊ ಸಂಸ್ಥೆಯ ಸಂಸ್ಥಾಪಕ ಡಾ.ಹರೀಶ ಹಂದೆ ಉಪನ್ಯಾಸ ನೀಡಿದರು.
ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮ ಪ್ರಭು ಸ್ವಾಮೀಜಿ, ಸಂಸ್ಥೆಯ ನಿರ್ದೇಶಕರು, ಪ್ರಾಚಾರ್ಯ ಡಾ.ಸಿದ್ರಾಮಪ್ಪ ಇಟ್ಟಿ, ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಸಿಬ್ಬಂದಿ ಇದ್ದರು.
ಪ್ರೊ.ಮಂಜುನಾಥ ಶರಣಪ್ಪನವರ ನಿರ್ವಹಿಸಿದರು.
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
Laxmi News 24×7