Breaking News

‘ಜಮೀರ್ ಒಬ್ರೆ ಕ್ಯಾಸಿನೋಗೆ ಹೋಗ್ತಿರಲಿಲ್ಲ, ಜೊತೆಗೆ ಇವ್ರೆಲ್ಲಾ ಇರ್ತಿದ್ರು’

Spread the love

ನಾಗಮಂಗಲ : ಕರ್ನಾಟಕದ ದುಡ್ಡೆಲ್ಲಾ ಶ್ರೀಲಂಕಾದ ಕ್ಯಾಸಿನೋಗೆ ಹೋಗುತ್ತಿದೆ. ರಾಜ್ಯದಲ್ಲಿ ಹೆಚ್ಚು ದುಡ್ಡು ಮಾಡಿ ಕ್ಯಾಸಿನೋದಲ್ಲಿ ಕಳೆದುಕೊಳ್ಳುತ್ತಿದ್ದಾರೆ, ಅದಕ್ಕಾಗಿ ಇಲ್ಲಿನ ದುಡ್ಡು ಇಲ್ಲೆ ಉಳಿಯಬೇಕಾದರೆ ಕ್ಯಾಸಿನೋ ಕರ್ನಾಟಕದಲ್ಲೇ ಆರಂಭಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡುವುದಾಗಿ ಶಾಸಕ ಸುರೇಶ್‌ಗೌಡ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವೊಂದಿದ್ದರೆ ಪ್ರಪಂಚದಲ್ಲಿ ಸಿಗುವ ಎಲ್ಲ ವಸ್ತುಗಳು ಶ್ರೀಲಂಕಾದ ಕ್ಯಾಸಿನೋದಲ್ಲಿಯೇ ಸಿಗುತ್ತದೆ. ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದಾರೋ ಅವರೆಲ್ಲರೂ ಅಲ್ಲಿ ಹೋಗಿ ದುಡ್ಡು ಕಳೆಯುತ್ತಿದ್ದಾರೆ.

ನಶೆಯಲ್ಲಿದ್ರಾ ಸೆಲೆಬ್ರಿಟಿಗಳು; ಕರಣ್ ಮನೆಯ ಪಾರ್ಟಿ ವಿಡಿಯೋ ಸತ್ಯ!

ಕ್ಯಾಸಿನೋಗೆ ಶಾಸಕ ಜಮೀರ್‌ ಒಬ್ಬರೇ ಹೋಗುತ್ತಿಲ್ಲ.

ಅಲ್ಲಿಗೆ ಒಂದು ದೊಡ್ಡ ಗುಂಪೇ ಹೋಗುತ್ತಿದೆ. ಎಲ್ಲರ ಪಾಸ್‌ ಪೋರ್ಟ್‌ ಪರಿಶೀಲಿಸಿದರೆ ಯಾರು ಯಾವಾಗ ಎಲ್ಲೆಲ್ಲಿಗೆ ಹೋಗಿದ್ದರು ಎಂಬುದು ತಿಳಿಯುತ್ತದೆ ಎಂದು ಹೇಳಿದರು.

 

ಈಗಾಗಲೇ ರಾಜ್ಯದಲ್ಲಿ ಡ್ರಗ್ ಮಾಫಿಯಾ ಸಾಕಷ್ಟು ಸದ್ದು ಮಾಡುತ್ತಿದ್ದು, ಹಲವರು ಈ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಅಷ್ಟೇ ಅಲ್ಲದೇ ಹಲವು ಪ್ರಮುಖರೇ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

 

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ

Spread the love ಗೋಲಿಹಳ್ಳಿಯ ಶ್ರೀ ಶಿವ ಮಂದಿರದಲ್ಲಿ ನೂತನ ಶಿವ ಮುಖವಾಡ ಮತ್ತು ನಂದಿ ಮೂರ್ತಿ ಪ್ರತಿಷ್ಠಾಪನೆ ಖಾನಾಪೂರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ