Breaking News

ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ ಇಲ್ಲ, ಅವರಿಗೆ ಆಯಸ್ಸು ಆರೋಗ್ಯ ಸಿಗಲಿ ಅಂತ ನಾನೂ ಹೇಳ್ತೀನಿ.

Spread the love

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬಕ್ಕೆ ವಿರೋಧ ಇಲ್ಲ, ಅವರಿಗೆ ಆಯಸ್ಸು ಆರೋಗ್ಯ ಸಿಗಲಿ ಅಂತ ನಾನೂ ಹೇಳ್ತೀನಿ. ಆದರೆ ಅವರು ಮಾಡದಿರುವ ಸಾಧನೆಗಳನ್ನು ಅಬ್ಬರದ ಜಾಹೀರಾತು, ಪ್ರಚಾರದ ಮೂಲಕ ಬಿಂಬಿಸಿರುವುದಕ್ಕೆ ನನ್ನ ವಿರೋಧವಿದೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ

 

ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮೋದಿ ಪ್ರಧಾನಿಯಾದ ಮೇಲೆ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ. ನೋಟು ಅಮಾನ್ಯೀಕರಣ, ಜಿಎಸ್​ಟಿ ಜಾರಿ ಮಾಡಿದ ಮೇಲೆ ದೇಶ ಆರ್ಥಿಕವಾಗಿ ಭಾರೀ ಕೆಳಮಟ್ಟಕ್ಕೆ ಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ರು.

ದೇಶದ ಆರ್ಥಿಕ ಸ್ಥಿತಿ ಪಾತಾಳಕ್ಕೆ ಹೋದ ನಂತರ ಭಾರೀ ಪ್ರಮಾಣದಲ್ಲಿ ಉದ್ಯೋಗ ನಷ್ಟ ಉಂಟಾಗಿದೆ. ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳು ಬಂದ್ ಆಗಿದ್ದು, ಅದರಿಂದಲೂ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ರೈತರು ಕೂಡ ಭಾರೀ ಕಷ್ಟದಲ್ಲಿದ್ದಾರೆ, ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ನರೇಂದ್ರ ಮೋದಿ ಕ್ರಾಂತಿ ಮಾಡುತ್ತಾರೆ ಎಂದು ಬೆಂಬಲಿಸಿದ ಯುವಕರು ನಿರುದ್ಯೋಗದಿಂದ ಜೀವನವೇ ಬೇಡ ಎಂಬ ಸ್ಥಿತಿ ತಲುಪಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು.

 

ನಿರುದ್ಯೋಗಿಗಳು ಇಂದು ಮೋದಿಯವರ ಜನ್ಮದಿನವನ್ನು ನಿರುದ್ಯೋಗ ದಿನ ಎಂದು ಆಚರಣೆ ಮಾಡ್ತಿದ್ದಾರೆ. ಮೋದಿ ಜನ್ಮದಿನಕ್ಕಲ್ಲ ನಮ್ಮ ವಿರೋಧ, ಆದರೆ ಅವರು ಹೇಳಿರುವ ಸುಳ್ಳಿಗೆ ನಮ್ಮ ವಿರೋಧ ಎಂದು ಹರಿಹಾಯ್ದರು.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ