Breaking News

ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್

Spread the love

ಬೆಂಗಳೂರು:  ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.

 

v

ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಹಿನ್ನೆಲೆ ಬೆಂಗಳೂರಿನ 36 ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ಜಾರಿ ಮಾಡಿದೆ.

ಯಾವ ಆಸ್ಪತ್ರೆಗಳು ಕಾನೂನು ಉಲ್ಲಂಘನೆ ಮಾಡಿವೆಯೋ ಅಂಥವರ ಮೇಲೆ ಶಿಸ್ತು ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದ್ದಾರೆ. ನಿನ್ನೆಯಷ್ಟೇ ಬಿಬಿಎಂಪಿ ಅಧಿಕಾರಿಗಳು, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದ 36 ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿತ್ತು.


Spread the love

About Laxminews 24x7

Check Also

ಮನೆಯಲ್ಲೇ ಹೈಟೆಕ್ ವೇಶ್ಯವಾಟಿಕೆ ದಂಧೆ

Spread the loveಮೈಸೂರು, (ಜುಲೈ 07): ಮೈಸೂರು (Mysuru) ತಾಲ್ಲೂಕಿನ ದಾಸನಕೊಪ್ಪಲಿನಲ್ಲಿ (Dasanakoppalu Village) ಅಕ್ರಮವಾಗಿ ನಡೆಯುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ (Prostitution) ದಂಧೆಯ ಮೇಲೆ ಪೊಲೀಸರು ದಾಳಿ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ