Breaking News

ಪುಲ್ವಾಮಾ ರೀತಿಯ ಉಗ್ರ ದಾಳಿ ಸಂಚು ವಿಫಲಗೊಳಿಸಿದ ಸೇನೆ; 52 ಕೆಜಿ ಸ್ಫೋಟಕ ಪತ್ತೆ

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿ ಬಳಿ 52 ಕೆ.ಜಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನೆ ಪತ್ತೆ ಮಾಡಿದೆ.

ಗುರುವಾರ ಬೆಳಗ್ಗೆ 8 ಗಂಟೆಗೆ ಶೋಧ ಕಾರ್ಯ ಆರಂಭಿಸಿದ್ದೆವು. ಹಣ್ಣಿನ ತೋಟವೊಂದರಲ್ಲಿ ಹೂತು ಹಾಕಿದ್ದ ಸಿಂಟೆಕ್ಸ್ ಟ್ಯಾಂಕ್ ಒಳಗಡೆ 52 ಕೆಜಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಈ ಸ್ಫೋಟಕಗಳನ್ನು 416 ಪೊಟ್ಟಣಗಳಾಗಿ ವಿಂಗಡಿಸಲಾಗಿದ್ದು ಪ್ರತಿಯೊಂದು ಪೊಟ್ಟಣವೂ 125 ಗ್ರಾಂ ತೂಕ ಹೊಂದಿದೆ ಎಂದು ಸೇನಾಪಡೆ ಹೇಳಿಕೆ ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಹೆಚ್ಚಿನ ಶೋಧ ನಡೆಸಿದಾಗ 50 ಸ್ಫೋಟಕಗಳನ್ನು ಹೊಂದಿರುವ ಮತ್ತೊಂದು ಟ್ಯಾಂಕ್ ಕಂಡುಬಂದಿದೆ ಎಂದು ಸೇನೆ ಹೇಳಿರುವುದಾಗಿ ವರದಿ ಉಲ್ಲೇಖಿಸಿದೆ.

ಕಳೆದ ವರ್ಷ ಫೆಬ್ರವರಿ 14 ರಂದು ಬೆಂಗಾವಲಿನಲ್ಲಿ ಪ್ರಯಾಣಿಸುತ್ತಿದ್ದ 40 ಕ್ಕೂ ಹೆಚ್ಚು ಸಿಆರ್‌ಪಿಎಫ್ ಸೈನಿಕರು ಆತ್ಮಾಹುತಿ ಬಾಂಬರ್‌ ಸ್ಫೋಟಿಸಿದ ಬಾಂಬ್‌ ದಾಳಿಯಲ್ಲಿ ಹುತಾತ್ಮರಾಗಿದ್ದರು.

ಸುಮಾರು 35 ಕೆಜಿ ಆರ್‌ಡಿಎಕ್ಸ್ ಸ್ಫೋಟಕ ಹೊಂದಿದ್ದ ಕಾರೊಂದನ್ನು ನುಗ್ಗಿಸಿ ಈ ದಾಳಿ ನಡೆಸಲಾಗಿತ್ತು. ಇದಾಗಿ ಕೆಲವು ವಾರಗಳ ನಂತರ, ಪಾಕಿಸ್ತಾನದ ಬಾಲಕೋಟ್‌ನಲ್ಲಿ ಜೈಶ್-ಇ-ಮೊಹಮ್ಮದ್ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ವೈಮಾನಿಕ ದಾಳಿ ನಡೆಸಿತ್ತು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ