Breaking News

ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ

Spread the love

ವಿಜಯಪುರ:  ಗರ್ಭಿಣಿಯನ್ನ ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್​​ವೊಂದು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಟಾಪ್ ನರ್ಸ್ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ವಿಜಯಪುರ ಹೊರವಲಯದ ಆಕಾಶವಾಣಿ ಕೇಂದ್ರದ ಬಳಿ ಘಟನೆ ನಡೆದಿದೆ.   ನಸುಕಿನ ಜಾವ 5 ಗಂಟೆ ಸುಮಾರಿಗೆ ಆ್ಯಂಬುಲೆನ್ಸ್​​ ಬಾಗೇವಾಡಿಯಿಂದ ಗರ್ಭಿಣಿಯನ್ನ ಕರೆದುಕೊಂಡು ಜಿಲ್ಲಾಸ್ಪತ್ರೆಗೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ.

ಇಎಂಟಿ  ಸ್ಟಾಪ್ ನರ್ಸ್ ತುಳಸಿ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಆ್ಯಂಬುಲೆನ್ಸ್​​ ಚಾಲಕ‌ ಶ್ರೀಶೈಲ್‌ಗೂ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗರ್ಭಿಣಿಯನ್ನ ಜಿಲ್ಲಾಸ್ಪತ್ರೆಗೆ ಶಿಫ್ಟ್​ ಮಾಡಲಾಗಿದ್ದು, ಅವರಿಗೆ ಯಾವುದೇ  ಅಪಾಯವಾಗಿಲ್ಲ.  ಆದ್ರೆ ಘಟನಾ ಯಾವೊಬ್ಬ ಅಧಿಕಾರಿಗಳು ಭೇಟಿ ನೀಡಿಲ್ಲವೆಂದು ಸಿಬ್ಬಂದಿ ಆರೋಪಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ