Breaking News

ಡ್ರಗ್ಸ್ ಪ್ರಕರಣ – ಅಕುಲ್ ಬಾಲಾಜಿ ,ಮತ್ತೆ ಮೂವರಿಗೆC.C.B.ನೋಟಿಸ್

Spread the love

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಮೂವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.

ಹೌದು. ನಟ, ಖ್ಯಾತ ನಿರೂಪಕ ಅಕುಲ್ ಬಾಲಾಜಿ, ಯುವರಾಜ್ ಆರ್.ವಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕುಮಾರ್‍ಗೆ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆ ಹಾಜರಾಗುವಂತೆ ನೋಟಿಸ್ ನೀಡಿದೆ. ಸದ್ಯ ಹೈದರಾಬಾದ್ ನಲ್ಲಿರುವ ಅಕುಲ್ ಬಾಲಾಜಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಿಸಿಬಿ ನೊಟೀಸ್ ತಲುಪಿದೆ ನಾಳೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ ವಿಚಾರಣೆಗೆ ಬರುತ್ತೇನೆ ಎಂದು ಹೇಳಿದ್ದಾರೆ.

ದೊಡ್ಡ ಬಳ್ಳಾಪುರ ತಾಲೂಕಿನ ಲಗುಮೇನಹಳ್ಳಿ ಗ್ರಾಮದಲ್ಲಿ ಅಕುಲ್ ಬಾಲಾಜಿ ಒಡೆತನದ ಸನ್ ಶೈನ್ ಎಂಬ ರೆಸಾರ್ಟ್ ಇದೆ. ಲಾಕ್ ಡೌನ್ ಅವಧಿಯಲ್ಲಿ ಈ ರೆಸಾರ್ಟ್ ನಲ್ಲಿ ಕಾನೂನು ಉಲ್ಲಂಘನೆ ನಡೆಸಿ ಕಾರ್ಯಕ್ರಮ ನಡೆಸಿದ್ದಕ್ಕೆ ಎಫ್‍ಐಆರ್ ಕೂಡ ದಾಖಲಾಗಿತ್ತು. ಬೆಂಗಳೂರಿನ ಥಣಿಸಂದ್ರ ನಿವಾಸಿಗಳ ಮದುವೆ ಕಾರ್ಯಕ್ರಮಕ್ಕೆ ಈ ರೆಸಾರ್ಟ್ ಬಾಡಿಗೆ ಕೊಡಲಾಗಿದೆಯಂತೆ. ಮಧ್ಯರಾತ್ರಿ 20ಕ್ಕೂ ಅಧಿಕ ಮಂದಿ ಈ ರೆಸಾರ್ಟ್‍ಗೆ ಬಂದಿಳಿದಿದ್ರು. ಈ ಅಪರಿಚಿತ ಜನರನ್ನು ಕಂಡು ಗ್ರಾಮದ ಜನರು ದೊಡ್ಡಬಳ್ಳಾಪುರ ಠಾಣೆಯಲ್ಲಿ ದೂರು ಕೂಡ ಕೊಟ್ಟಿದ್ದರು. ಅಲ್ಲದೆ ವಿರೇನ್ ಖನ್ನಾಗೆ ಅಕುಲ್ 3 ಬಾರಿ ಈ ರೆಸಾರ್ಟ್ ಬಾಡಿಗೆಗೆ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಶಾಸಕ ಆರ್.ವಿ ದೇವರಾಜ್ ಮಗನಾಗಿರುವ ಯುವರಾಜ್ ಆರ್. ವಿ ಸುದಾಮನಗರದ ಮಾಜಿ ಕಾರ್ಪೋರೇಟರ್. ಈ ಹಿಂದೆ ಹ್ಯಾರಿಸ್ ಪುತ್ರ ನಲಪಾಡ್ ಪ್ರಕರಣದಲ್ಲಿಯೂ ಯುವರಾಜ್ ಹೆಸರು ಕೇಳಿ ಬಂದಿತ್ತು. ಹೀಗಾಗಿ ಅಂದು ಸಿಸಿಬಿ ಪೊಲೀಸರು ಯುವರಾಜ್ ಬಳಿ ಹೇಳಿಕೆ ಪಡೆದು ವಾಪಸ್ ಕಳುಹಿಸಿದ್ದರು.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ಹಾಗೂ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರ ಸೇರಿದ್ದಾರೆ. ಸಂಜನಾ ನ್ಯಾಯಾಂಗ ಬಂಧನ ಇಂದು ಮುಕ್ತಾಯವಾಗುತ್ತಿದ್ದು, ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆಯಾಗಿದೆ. ನಾಳೆ ರಾಗಿಣಿಯ ಜಾಮೀನು ಅರ್ಜಿ ವಿಚಾರಣೆಯೂ ಇದೆ.

ಇತ್ತ ನಟಿ ದಿಗಂತ್ ಹಾಗೂ ನಟಿ ಐಂದ್ರಿತಾ ಅವರನ್ನು ಕೂಡ ಸಿಸಿಬಿ ವಿಚಾರಣೆ ನಡೆಸಿ ವಾಪಸ್ ಕಳುಹಿಸಿತ್ತು. ಅಲ್ಲದೆ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಈ ಟೆನ್ಶನ್ ನಡುವೆಯೂ ಶೂಟಿಂಗ್ ಗೆ ಹೋಗುವುದಾಗಿ ಗಂಡ-ಹೆಂಡತಿ ನಿನ್ನೆ ಹೇಳಿದ್ದರು. ಆದರೆ ಕೊನೆ ಗಳಿಗೆಯಲ್ಲಿ ಬ್ರೇಕ್ ಪಡೆದು ಪೋಸ್ಟ್ ಪೋನ್ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಮಾರಿಗೋಲ್ಡ್ ಸಿನಿಮಾದ ಸೆಕೆಂಡ್ ಶೆಡ್ಯೂಲ್ ಶೂಟಿಂಗ್ ಇಂದು ನಡೆಯಬೇಕಿತ್ತು. ಈ ಮಧ್ಯೆ ಇನ್ನು ಕೂಡ ಸಿಸಿಬಿ ವಿಚಾರಣೆಗೆ ಹಾಜರಾಗಬೇಕಾದ ಹಿನ್ನೆಲೆ ದಿಗಂತ್ ವಿಶ್ರಾಂತಿಯಲ್ಲಿದ್ದಾರೆ. ಮೊನ್ನೆಯಿಂದಲೂ ಆರ್ ಆರ್ ನಗರದ ನಿವಾಸದಲ್ಲಿ ಐಂದ್ರಿತಾ-ದಿಗಂತ್ ಇದ್ದು, ಕೇವಲ ಆಪ್ತರು ವಕೀಲರ ಜೊತೆ ಮಾತ್ರ ಮಾತುಕತೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾಜ್ಯದ 50 ವರ್ಷಗಳ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ ಬದಲಾವಣೆ ನಿರ್ಧಾರ: ಡಿ.ಕೆ ಶಿವಕುಮಾರ್

Spread the loveಬೆಂಗಳೂರು: ರಾಜ್ಯದಲ್ಲಿ ಇರೋ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ  ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ