ನವದೆಹಲಿ: ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಜೆಡಿಎಸ್ ನಾಯಕರು ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು ಅಂದು ಕುಮಾರಸ್ವಾಮಿ ನನ್ನನ್ನು ಭೇಟಿ ಮಾಡಿ ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಜೊತೆಗೆ ಕೆಲವು ಕಾಮಗಾರಿಗಳ ಒಪ್ಪಿಗೆ ಕೇಳಿದ್ದಾರೆ. ಇದನ್ನು ಹೊರತುಪಡಿಸಿ ಯಾವುದೇ ರಾಜಕೀಯ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದರು.
ಬಿ.ವೈ ವಿಜಯೇಂದ್ರ ಸೂಪರ್ ಸಿಎಂ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆ ತಿರುಗೇಟು ನೀಡಿದ ಬಿಎಸ್‍ವೈ, ವಿಜಯೇಂದ್ರ ಬಿಜೆಪಿಯಲ್ಲಿ ಉಪಾಧ್ಯಕ್ಷರಾಗಿ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅದನ್ನು ಬಿಟ್ಟು ರಾಜ್ಯ ಸರ್ಕಾರದ ಯಾವುದೇ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
Laxmi News 24×7