Breaking News

ಚಿಕ್ಕೋಡಿ: ಪಂಚಾಯಿತಿ ಸಿಬ್ಬಂದಿ ‌ ವೇತನಕ್ಕೆ ಹಣ ಮೀಸಲಿಡುವಂತೆ ಪ್ರತಿಭಟನೆ

Spread the love

ಚಿಕ್ಕೋಡಿ: 14 ನೇ ಹಣಕಾಸಿನ ಯೋಜನೆಯಲ್ಲಿ ಸಿಬ್ಬಂದಿ ವೇತನಕ್ಕೆ ಶೇ.10 ರಷ್ಟು ಮೊತ್ತವನ್ನು ಮೀಸಲಿರಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘ ಚಿಕ್ಕೋಡಿ ತಾಲೂಕ ಸಮಿತಿ ವತಿಯಿಂದ ಚಿಕ್ಕೋಡಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿದರು.

ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಕೊರತೆಯಾಗುವ ಮೊತ್ತವನ್ನು 14 ನೇ ಹಣಕಾಸಿನ ಯೋಜನೆಯಲ್ಲಿ ಶೇ.10 ರಷ್ಟು ಮೊತ್ತವನ್ನು ಸಿಬ್ಬಂದಿ ಖಾತೆಗೆ ಜಮಾ ಮಾಡಿ ವೇತನ ನೀಡಬೇಕು. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ನಾಲ್ಕು ಆದೇಶಗಳನ್ನು ಮಾಡಿದರೂ ಇನ್ನೂ ವರೆಗೆ 14 ನೇ ಹಣಕಾಸಿನಲ್ಲಿ ಶೇ.10 ಮೊತ್ತವನ್ನು ಸಿಬ್ಬಂದಿ ವೇತನಕ್ಕೆ ನೀಡಿಲ್ಲ.

ಚಿಕ್ಕೋಡಿ ತಾಲೂಕಿನಲ್ಲಿ ಒಂದನೇ ಕಂತಿನ ಕ್ರಿಯಾ ಯೋಜನೆ ಮಾಡಲಾಗಿ ಶೇ.10 ರಷ್ಟು ಮೊತ್ತ ಕಾಯ್ದಿರಿಸಿಲ್ಲ ಎರಡನೇ ಕಂತಿನ ಅನುದಾನ ಬಂದಿದ್ದರೂ ಇನ್ನೂ ವರೆಗೆ ಕ್ರಿಯಾ ಯೋಜನೆ ಮಾಡಿಲ್ಲ. ಅದಕ್ಕೆ ಎರಡನೇ ಕಂತಿನ ಅನುದಾನದಡಿ ಕ್ರಿಯಾ ಯೋಜನೆ ಮಾಡಿ ಶೇ.10 ರಷ್ಟು ಮೊತ್ತವನ್ನು ಸಿಬ್ಬಂದಿ ವೇತನಕ್ಕೆ ಕಾಯ್ದಿರಿಸಬೇಕೆಂದು ಒತ್ತಾಯಿಸಿ ನೂರಾರು ಪಂಚಾಯತಿ ನೌಕರರು ಪ್ರತಿಭಟನೆ ಮಾಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ