Breaking News

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು

Spread the love

ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಅವರ 19-9-2020 ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿ ಪ್ರಮುಖಾಂಶಗಳು
————————–

* ನದಿ ಪಾತ್ರದ ತೆರವು ಕುರಿತು ಮಹತ್ವದ ಮೊದಲ ಸಭೆ ಇಂದು ಆಯೋಜಿಸಲಾಗಿದೆ.

* ಮಲಪ್ರಭಾ, ಘಟಪ್ರಭಾ, ಬಳ್ಳಾರಿ ನಾಲಾ, ಹಿರಣ್ಯಕೇಶಿ ನದಿಪಾತ್ರದ ಒತ್ತುವರಿ ಬಗ್ಗೆ ಬೆಳಗಾವಿ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಸಮೀಕ್ಷೆ ನಡೆಸಲಾಗುವುದು.

* ಮುಂಚೆ ಪ್ರವಾಹ ಬಂದಾಗ ಮೂರೇ ತಾಸಿನಲ್ಲಿ ನೀರು ಇಳಿಮುಖ.

* ಜಲಾಶಯಗಳಲ್ಲಿ ಹೂಳು ತುಂಬಲು ಹಾಗೂ ನೀರು ಸಂಗ್ರಹ ಪ್ರಮಾಣ ಕಡಿಮೆಗೆ ಒತ್ತುವರಿಯೇ ಕಾರಣ.

* ಸಮೀಕ್ಷೆ ಬಳಿಕ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಯೋಜನೆ ರೂಪಿಸಲಾಗುವುದು.

* ಅಗತ್ಯತೆ ಆಧರಿಸಿ ಸಮೀಕ್ಷೆ ಬಳಿಕ ಕೇಂದ್ರ ಸರ್ಕಾರದ ನೆರವು ಪಡೆಯುವ ಬಗ್ಗೆ ತೀರ್ಮಾನ

* ಸಭೆಯ ವರದಿ ಆಧರಿಸಿ

* ಈಗಾಗಲೇ ಬೆಳಗಾವಿ ಪ್ರಾದೇಶಿಕ ಆಯುಕ್ತರು ಪ್ರಾಥಮಿಕ ಸಮೀಕ್ಷೆ ನಡೆಸಿದ್ದಾರೆ.

* ಸಮಗ್ರ ಸಮೀಕ್ಷೆ ಬಳಿಕ ಮತ್ತೊಮ್ಮೆ ಸಭೆ ನಡೆಸಿ ಶಾಶ್ವತ ಪರಿಹಾರ ರೂಪಿಸಲಾಗುವುದು.

* ನದಿಪಾತ್ರದ ಅತಿಕ್ರಮಣ ಆಗಿರುವುದು ಸತ್ಯ. ಒತ್ತುವರಿ ತೆರವುಗೊಳಿಸಿದರೆ ಪ್ರವಾಹ ನಿಯಂತ್ರಣ ಸಾಧ್ಯ.

* ಕಳಸಾ-ಬಂಡೂರಿ ಕುರಿತು ಸಿಎಂ ಕೂಡ ಚರ್ಚೆ ನಡೆಸಿದ್ದಾರೆ.

* ಸಂಪುಟ ವಿಸ್ತರಣೆ ಹೈಕಮಾಂಡ್ ನಿರ್ಧರಿಸಲಿದೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು.

ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
***


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ