Breaking News

ಉಡುಪಿಯಲ್ಲಿ ವರುಣನ ಅಬ್ಬರ – ಮನೆಗಳು ಮುಳುಗಡೆ,

Spread the love

ಉಡುಪಿ: ರಾಜ್ಯದಲ್ಲಿ ಮುಂದಿನ ಎರಡು ದಿನ ಮಹಾ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಕಟ್ಟೆಚ್ಚರಿಕೆ ನೀಡಿದೆ. ಇತ್ತ ಉಡುಪಿಯಲ್ಲಿ ಶನಿವಾರ ಮಧ್ಯಾಹ್ನದಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ನದಿಪಾತ್ರದ ಊರುಗಳಿಗೆ ನೀರು ನುಗ್ಗಿದ

ಉಡುಪಿ ನಗರದ ಕೆಲಭಾಗ ಕೂಡ ಮುಳುಗಡೆಯಾಗಿದೆ. ಕಲ್ಸಂಕ, ಬೈಲಕೆರೆ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಬಾರಿ ನೀರು ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತಡೆಯಾಗಿದೆ. ಸ್ವರ್ಣ ನದಿ ಉಕ್ಕಿ ಹರಿಯುತ್ತಿದ್ದು, ಮಲ್ಪೆ ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಸ್ತಬ್ಧವಾಗಿದೆ. ಹಿರಿಯಡ್ಕದಲ್ಲಿ ಸೇತುವೆ ಮೇಲೆ ನೀರು ಹರಿಯುತ್ತಿರುವುದರಿಂದ ವಾಹನಗಳ ಓಡಾಟಕ್ಕೆ ಪೊಲೀಸರು ತಡೆ ಒಡ್ಡಿದ್ದಾರೆ.

ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಉಡುಪಿ ಶ್ರೀಕೃಷ್ಣ ಮಠದ ಸಮೀಪ ರಾಜಾಂಗಣ ಯಾತ್ರಿಕರ ವಾಹನ ನಿಲುಗಡೆ ಸ್ಥಳವು ಮುಳುಗಡೆಯಾಗಿದೆ. ಇಂದ್ರಾಣಿ ನದಿಯ ಅಕ್ಕ ಪಕ್ಕದ ಪ್ರದೇಶಗಳು ಜಲಾವೃತಗೊಂಡಿವೆ. ಬೈಲಕೆರೆ ಪರಿಸರದಲ್ಲಿ ನೀರಿನ ಮಟ್ಟ ಏರಿದ್ದು, ಹಲವಾರು ಮನೆಗಳಿಗೆ ನೀರು ಹೊಕ್ಕಿರುವ ಘಟನೆ ನಡೆದಿದೆ. ಮನೆ ಅಂಗಳದಲ್ಲಿ ನಿಲುಗಡೆಗೊಳಿಸಿರುವ ವಾಹನಗಳು ಮುಳುಗಡೆಯಾಗಿದೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ