Breaking News

ಕರುನಾಡಿಗೆ ಮತ್ತೆ ವರುಣಾಘಾತ; ಹವಾಮಾನ ಇಲಾಖೆ ಎಚ್ಚರಿಕೆ.

Spread the love

ಬೆಳಗಾವಿ ಸೇರಿ ಉತ್ತರದ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್
ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಕರುನಾಡಿಗೆ ವರಣನ ಕಂಟಕವಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಈಗಾಗಲೇ ವರುಣನ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗಗಳಲ್ಲಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ನಡುವೆ ಇನ್ನೂ ಎರಡು ದಿನ ಮಳೆ ಹೆಚ್ಚಲಿದ್ದು, ಸೆ.22 ರವರೆಗೆ ಕರಾವಳಿಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಬೆಳಗಾವಿ, ಬೀದರ್, ರಾಯಚೂರು, ಕಲಬುರಗಿ, ಯಾದಗಿರಿ, ಧಾರವಾಡ ಹಾವೇರಿ ಜಿಲ್ಲೆಗಳಲ್ಲೂ ಎರಡು ದಿನ ವರುಣನ ಆರ್ಭಟ ಮುಂದುವರಿಯಲಿದ್ದು, ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ನಡುವೆ ಭೀಮಾ ನದಿ ತೀರದಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದೆ. ಸೊನ್ನಾ ಬ್ಯಾರೇಜ್ ನಿಂದ 1 ಲಕ್ಷ ಕ್ಯೂಸೆಕ್ ನೀರು ಹರಿಬಿಡಲಾಗಿದ್ದು, ನೀರಿನ ಪ್ರಮಾಣ ಇನ್ನಷ್ಟು ಹೆಚ್ಚಾದಲ್ಲಿ ಪ್ರವಾಹ ಉಂಟಾಗುವ ಆತಂಕ ಎದುರಾಗಿದೆ.

ಇನ್ನು ರಾಯಚೂರು ಜಿಲ್ಲೆಯ ಸರ್ಜಾಪುರ ಗ್ರಾಮದಲ್ಲಿ ನೂರಾರು ಎಕರೆ ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ಸೇತುವೆಗಳು ಮುಳುಗಡೆಯಾಗಿವೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.


Spread the love

About Laxminews 24x7

Check Also

ದರ್ಶನ್‌ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ನಿರಾಕರಣೆ ಆರೋಪ: ಕಾರಾಗೃಹಕ್ಕೆ ಭೇಟಿ ನೀಡುವಂತೆ ಕಾರ್ಯದರ್ಶಿಗೆ ಕೋರ್ಟ್ ಸೂಚನೆ

Spread the love ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಅವರು ಜೈಲಿನಲ್ಲಿ ತಮಗೆ ಕನಿಷ್ಠ ಸೌಲಭ್ಯ ನೀಡುತ್ತಿಲ್ಲವೆಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ