Breaking News

ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ

Spread the love

ಗೋಕಾಕ್: ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.

ನಗರದ ಅಡಿಬಟ್ಟಿ ಕಾಲೋನಿಯಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಇಂದು ಉದ್ಘಾಟಿಸಿ, ಮಾತನಾಡಿದರು.

ಪೌರ ಕಾರ್ಮಿಕರಿಗಾಗಿ ಜಿ+2ಮಾದರಿಯಲ್ಲಿ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ಮುಂದಿನ ಹಂತದಲ್ಲಿ 10 ಎಕರೆ ಜಾಗದಲ್ಲಿ ಇನ್ನಷ್ಟು ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ. ಈಗ ನಿರ್ಮಾಣ ಮಾಡಲಾಗಿರುವ ಮನೆಯ ಜಾಗದಲ್ಲಿಯೇ 1 ಹಾಲ್ , 2 ಬೆಡ್ ರೂಮ್ ಸೇರಿ ಇನಷ್ಟು ವ್ಯವಸ್ಥಿತ ರೀತಿಯಲ್ಲಿ ಶೀಘ್ರದಲ್ಲಿ ನಿರ್ಮಿಸಲಾಗುತ್ತದೆ ಎಂದರು.

ರಾಜ್ಯದಲ್ಲಿ ಕೊರೊನಾದಿಂದ ಆರ್ಥಿಕ ಸಮಸ್ಯೆಯಾಗುವುದರಿಂದ ಹಂತ ಹಂತವಾಗಿ ಮನೆ ನಿರ್ಮಾಣ ಮಾಡಿ ಕೊಡಲಾಗುತ್ತದೆ. ಆರ್ಥಿಕ ಸ್ಥಿತಿ ಸುಧಾರಣೆಗೊಳಿಸಿಕೊಂಡು, ಗೋಕಾಕ್ ತಾಲ್ಲೂಕಿನ ಸಮಗ್ರ ಅಭಿವೃದ್ದಿಗೆ ಶ್ರಮಿಸಲಾಗುತ್ತದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ