Breaking News

ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಊಸರವಳ್ಳಿ:H.D.K.

Spread the love

ಬೆಂಗಳೂರು, ಸೆ.20- ಲಾಲಸೆಯಿಂದ ಕಾಂಗ್ರೆಸ್ ಗೆ ಜಿಗಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್ ಅವಕಾಶ ವಾದಿ ಪಕ್ಷ ಎನ್ನುವ ಮೂಲಕ ತಮ್ಮ ಊಸರವಳ್ಳಿ ರಾಜಕಾರಣದ ನಿಜಬಣ್ಣ ಬಯಲು ಮಾಡಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚï.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

ಜೆಡಿಎಸ್ ಪಕ್ಷದಲ್ಲಿದ್ದಾಗ ಅಧಿಕಾರ,ಸ್ಥಾನ- ಮಾನಗಳನ್ನು ಅನುಭವಿಸಿ ತಮ್ಮ ಬೆಂಬಲಿಗ ರೊಂದಿಗೆ ಗಂಟು ಮೂಟೆ ಕಟ್ಟಿಕೊಂಡು ಅಧಿಕಾರದ ಆಸೆಗಾಗಿ, ಅವಕಾಶವಾದಿ ಹಾದಿ ಹಿಡಿದ ಕೃತಘ್ನಗೇಡಿತನದ ಸಿದ್ದರಾಮಯ್ಯ ಅವರಿಂದ ನಮ್ಮ ಪಕ್ಷ ಸ್ವಾಭಿಮಾನದ ಪಾಠ ಕಲಿಯಬೇಕಿಲ್ಲ ಎಂದು ಹೇಳಿದ್ದಾರೆ.

ನಿಮ್ಮ ಸ್ವಾಭಿಮಾನ ದ ಪ್ರಲಾಪ ಮಠದೊಳಗಿನ ಬೆಕ್ಕಿನ ಮುಖವಾಡದಂತಿದೆ. ಕಾಂಗ್ರೆಸ್ ಮುಖ್ಯಮಂತ್ರಿಯಾಗಿದ್ದಾಗಲೇ ಕಾಂಗ್ರೆಸ್ ಪಕ್ಷ ನಿರ್ನಾಮವಾಗಬೇಕು. ಇದನ್ನು ಬುಡಸಹಿತ ಕಿತ್ತೊಗೆಯಬೇಕು ಎಂದು ಬಹಿರಂಗವಾಗಿ ಅಂತ ರಂಗದ ಮಾತನ್ನು ಉದ್ಗರಿಸಿದ್ದ ನೀವು ಎಂತಹ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಗುಡುಗಿದ್ದಾರೆ.

ಅಧಿಕಾರದ ನಿರ್ಮೋಹ, ಸ್ವಾಭಿಮಾನಕ್ಕೆ ಕಟ್ಟುಬಿದ್ದು ಹೆಚ.ಡಿ.ದೇವೇಗೌಡರು ಪ್ರಧಾನಿ ಹುದ್ದಾಯನ್ನೇ ತ್ಯಜಿಸಿ ಬಂದರು. ಅಧಿಕಾರ ಉಳಿಸಿಕೊಳ್ಳಬೇಕೆಂದಿದ್ದರೆ ಪ್ರಧಾನಿಯಾಗಿ ಮುಂದುವರಿಯಬಹುದಿತ್ತು. ದೇವೇಗೌಡರ ಈ ಸ್ವಾಭಿಮಾನಿ ರಾಜಕಾರಣವನ್ನು ಇಷ್ಟು ಬೇಗ ಮರೆತು ಬಿಟ್ಟಿರಾ? ಎಂದು ಪ್ರಶ್ನಿಸಿದ್ದಾರೆ.

ಆತ್ಮವಂಚನೆಯ ರಾಜಕಾರಣಿಯಿಂದ ಜೆಡಿಎಸ್ ಕಲಿಯುವುದು ಏನೇನೂ ಇಲ್ಲ. ಜೆಡಿಎಸ್ ಪಕ್ಷ ಅಧಿಕಾರದಲ್ಲಿ ಇದ್ದಾಲೆಲ್ಲೇ ಜನರ ಕಷ್ಟ ಕಾರ್ಪಣ್ಯಗಳು ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದೆ. ಅಧಿಕಾರದ ಮದ ಮತ್ತು ದುರಹಂಕಾರವನ್ನು ಎಂದೂ ಪ್ರದರ್ಶನ ಮಾಡಿಲ್ಲ. ಅಧಿಕಾರದ ಅಲ್ಪಾವಧಿಯಲ್ಲೂ ಜನಕಲ್ಯಾಣ ಪಕ್ಷದ ಹೆಗ್ಗುರುತಾಗಿತ್ತು.

ಪಕ್ಷಾಂತರ ಮಾಡಿ ಅಧಿಕಾರ ಹಿಡಿದ ನೀವು ಆ ಪಕ್ಷದಲ್ಲಿ ಬಿತ್ತಿದ ಬೆಳೆ ಮತ್ತು ಕಳೆ ಏನೆಂಬುದನ್ನು ನಿಮ್ಮನ್ನು ಆಲಿಂಗಿಸಿಕೊಂಡ ಪಕ್ಷದವರು ಈಗ ಅನುಭವಿಸುತ್ತಿದ್ದಾರೆ. ನಿಮ್ಮ ಸ್ವಾರ್ಥ ರಾಜಕಾರಣದ ಕುಟಿಲ ತಂತ್ರಗಳನ್ನು ಮರೆಮಾಚಿಕೊಳ್ಳಲು ಬೆಳೆದ ಪಕ್ಷಕ್ಕೆ ಮಗ್ಗುಲಲ್ಲಿ ಇದ್ದು ಬಾಕು ಹಾಕಿದವರ ಮಾಜರ್ಲ ಉಪದೇಶ ಯಾರಿಗೆ ಸಹ್ಯವಾದೀತು? ಎಂದಿದ್ದಾರೆ.

ತನುವಿನೊಳು ಕಪಟ, ಮನದೊಳು ಮರ್ಕಟ, ಆಚಾರ ಲಿಂಗವ ಭಂಗಗೊಳಿಸಿ, ಸಂಗ ಕೇಳಿಯ ಮನದ, ಮುಂದಣ ಆಸೆಯ ಮತಿಗೇಡಿ, ನೀನು ಶರಣನೆಂದು ಕೊಂಡೊಡೆ, ಲಿಂಗ – ಜಂಗಮ ಕೂಡಲ ಸಂಗನು ಮುನಿದು, ತಲೆ ಹೋಳಾದೀತು ಎಂಬ ವಚನವನ್ನು ಉಲ್ಲೇಖಿಸಿದ್ದಾರೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ