ಬೆಂಗಳೂರು: ತಂಗಿಯನ್ನು ಪ್ರೀತಿಸಿದ ಯುವಕನನ್ನು ಅಣ್ಣನೋರ್ವ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಕಾಡುಗೋಡಿ ಸಮೀಪ ನಡೆದಿದೆ.
ಕೊಲೆಯಾದ ಯುವಕನನ್ನು ರಾಜೇಶ್ (35) ಎಂದು ಗುರುತಿಸಲಾಗಿದೆ. ರಾಜೇಶ್ ಒಂದು ಹುಡುಗಿಯನ್ನು ಪ್ರೀತಿ ಮಾಡುತ್ತಿದ್ದ. ಆದರೆ ನಂತರ ಆ ಯುವತಿಯನ್ನು ಪ್ರೀತಿಯನ್ನು ನಿರಾಕರಣೆ ಮಾಡಿದ್ದ. ಇದರಿಂದ ಮನನೊಂದ ಯುವತಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಳು.
ತಂಗಿ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ, ನನ್ನ ತಂಗಿಯ ಬಾಳು ಈತನಿಂದಲೇ ಹಾಳಾಯ್ತು ಎಂದು ರಾಜೇಶ್ ನನ್ನು ಕೊಚ್ಚಿಕೊಲೆ ಮಾಡಿದ್ದಾನೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ರಾಜೇಶ್‍ನನ್ನು ಅಣ್ಣ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆಯ ಬಳಿಕ ಆರೋಪಿ ಅಲ್ಲಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ.
ಈ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಸಿಪಿ ದೇವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7