Breaking News

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 87,000 ಮಂದಿಗೆ ಕೊರೋನಾ ಪಾಸಿಟಿವ್, 1,130 ಡೆತ್..!

Spread the love

ನವದೆಹಲಿ/ಮುಂಬೈ, -ದೇಶದಲ್ಲಿ ಡೆಡ್ಲಿ ಕೋವಿಡ್-19 ವೈರಸ್ ಹಾವಳಿಯ ಏರಿಳಿತ ಮುಂದುವರಿದಿದೆ. ಇದೇ ವೇಳೆ ರೋಗಿಗಳ ಚೇತರಿಕೆ ಪ್ರಮಾಣದಲ್ಲಿ ಹೆಚ್ಚಳ ಕಂಡುಬರುತ್ತಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಈವರೆಗೆ ಶೇ.80.12ರಷ್ಟು ಅಂದರೆ 43.96 ಲಕ್ಷ ರೋಗಿಗಳು ಗುಣಮುಖರಾಗಿದ್ದಾರೆ.

ಒಂದೇ ದಿನ 86,961 ಮಂದಿಗೆ ಸೋಂಕು ತಗಲಿದ್ದು, ನಾಲ್ಕು ದಿನಗಳಿಂದ ಹೊಸ ಪ್ರಕರಣಗಳಲ್ಲಿ ಸತತ ಇಳಿಕೆ ಕಂಡುಬಂದಿದೆ. ಒಂದೇ ದಿನ 1,130 (ಮೊನ್ನೆ1,247)ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತ17ನೆ ದಿನ 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ.

ಇದರೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ87,882ದಾಟಿದೆ ಎಂದು ಕೇಂದ್ರಆರೋಗ್ಯ ಮತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ. ಭಾರತದಲ್ಲಿ 20 ದಿನಗಳಿಂದಲೂ ಸರಾಸರಿ 90,000 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ.

ನಿನ್ನೆ86,961ಸೋಂಕು ಪ್ರಕರಣಗಳೊಂದಿಗೆ. ಒಟ್ಟು ರೋಗಿಗಳ ಸಂಖ್ಯೆ54,87,580ಕ್ಕೇರಿದ್ದು, ಇಂದು ಸಂಜೆ ವೇಳೆಗೆ 55 ಲಕ್ಷ ಮೀರುವ ಸಾಧ್ಯತೆ ಇದೆ.

ಆಗಸ್ಟ್ 7ರಂದು 20 ಲಕ್ಷಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.15ರಂದು 50 ಲಕ್ಷದಾಟಿದೆ. ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.80.12ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆದೇಶದಲ್ಲಿ ಸುಮಾರು 6.43ಕೋಟಿ ಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ದೇಶದಲ್ಲಿಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಂದಿದ್ದರೂ, ಮತ್ತೊಂದೆಡೆ 10.03ಲಕ್ಷ ಸಕ್ರಿಯ ಪ್ರಕರಣಗಳು ಸಹ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ ಸುಮಾರು 43.96ಲಕ್ಷ ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ. ದೇಶದಲ್ಲಿ ಈಗ 10,03,299 ಆಕ್ಟಿವ್ ಕೇಸ್‍ಗಳಿವೆ.

43,96,399 ಮಂದಿ ಚೇತರಿಸಿಕೊಂಡಿದ್ದು, ಗುಣಮುಖ ಪ್ರಕರಣ ಶೇ.80.12 ಕ್ಕೇರಿದ್ದು, ಮರಣ ಪ್ರಮಾಣ ಶೇ.1.60ಗೆ ಇಳಿದಿದೆ. ಸಕ್ರಿಯ ಪ್ರಕರಣಗಳಿಗೆ ಹೋಲಿಸಿದಲ್ಲಿ, ರಿಕವರಿರೇಟ್‍ನಲ್ಲಿ ನಾಲ್ಕು ಪಟ್ಟುಗಳಿಗಿಂತಲೂ ಅಧಿಕ ಹೆಚ್ಚಳ ಕಂಡು ಬಂದಿರುವುದು ಸಮಾಧಾನಕರ ಸಂಗತಿ.

ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ. ಮಹಾರಾಷ್ಟ್ರ ರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ. ದೇಶದಾದ್ಯಂತ ನಿನ್ನೆಒಂದೇ ದಿನ 7.31ಲಕ್ಷಕ್ಕೂ ಹೆಚ್ಚುಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 6.43ಕೋಟಿಗೂ ಅಧಿಕ ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ