ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ.
ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.
Laxmi News 24×7