Breaking News

ಸೆ.25 ರಂದು ‘ಕರ್ನಾಟಕ ಬಂದ್’ ಇಲ್ಲ : ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ

Spread the love

ಬೆಂಗಳೂರು : ಸೆಪ್ಟೆಂಬರ್ 25 ರಂದು ಕರ್ನಾಟಕ ಬಂದ್ ಇಲ್ಲ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾದ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಸೆ.25 ರಂದು ಕರ್ನಾಟಕ ಬಂದ್ ಇಲ್ಲ , ಬಂದ್ ಬದಲು ಹೆದ್ದಾರಿ ಮಾತ್ರ ಬಂದ್ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಮಸೂಧೆಗಳನ್ನು ವಿರುದ್ಧ ರೈತರ ಸಂಘಗಳು ಸಿಡಿದೆದ್ದಿವೆ. ಸರ್ಕಾರದ ರೈತವಿರೋಧಿ ಮಸೂಧೆ ವಿರೋಧಿಸಿ, ಇದೇ ಸೆಪ್ಟೆಂಬರ್ 25ರ ಶುಕ್ರವಾರದಂದು ಕರ್ನಾಟಕ ಬಂದ್ ಗೆ ರೈತ ಸಂಘಟನೆಗಳು ಕರೆ ನೀಡಿತ್ತು. ಸೆ.25ರ ಶುಕ್ರವಾರದಂದು ಕರ್ನಾಟಕ ಬಂದ್ ಆಗಲಿದೆ ಎಂದು ಹೇಳಲಾಗುತ್ತಿತ್ತು . ಆದರೆ ಇದೀಗ ಸೆ.25 ರಂದು ಕರ್ನಾಟಕ ಬಂದ್ ಮಾಡೋಲ್ಲ, ಬಂದ್ ಬದಲು ಹೆದ್ದಾರಿ ಮಾತ್ರ ಬಂದ್ ಮಾಡಲಾಗುವುದು ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಕರ್ನಾಟಕ ಬಂದ್ ಬದಲಿಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲಾಗುವುದು, ಸರ್ಕಾರದ ಮುಂದಿನ ನಡೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಬಂದ್ ಬಗ್ಗೆ ನಿರ್ಧರಿಸಲಾಗುವುದು, ಬಿಲ್ ಹಿಂಪಡೆಯದಿದ್ರೆ ಬಂದ್ ಗೆ ದಿನಾಂಕ ನಿಗದಿ ಮಾಡಲಾಗುವುದು, ಅಹೋರಾತ್ರಿ ಧರಣಿ ನಡೆಸಲಾಗುವುದು, ಸರ್ಕಾರದ ಮುಂದಿನ ನಡೆ ನೋಡಿಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು, ಸದ್ಯಕ್ಕೆ ಬಂದ್ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ


Spread the love

About Laxminews 24x7

Check Also

ಕ್ಷಮೆ ಕೇಳಲಿ, ಇಲ್ಲವೇ ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು: ಸಚಿವೆ ಹೆಬ್ಬಾಳ್ಕರ್

Spread the loveಬೆಂಗಳೂರು: ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ