Breaking News

ಸಿಮೆಂಟ್ ಬೆಲೆ ಏರಿಕೆ: ಜಿಲ್ಲಾಡಳಿತದ ಮಧ್ಯಪ್ರವೇಶಕ್ಕೆ ಆಗ್ರಹ

Spread the love

ಬೆಳಗಾವಿ: ‘ಸಿಮೆಂಟ್ ಬೆಲೆ ದಿನೇ ದಿನೇ ಹೆಚ್ಚುತ್ತಿದ್ದು, ಸ್ಥಿರತೆ ಕಾಪಾಡಿಕೊಂಡು ಗ್ರಾಹಕರ ವಿಶ್ವಾಸ ಗಳಿಸಲು ಕಂಪನಿಗಳು ಸಹಕರಿಸುತ್ತಿಲ್ಲ. ಇದರಿಂದ ನಮಗೆ ಆಗುತ್ತಿರುವ ತೊಂದರೆ ನಿವಾರಿಸಲು ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ಜಿಲ್ಲಾ ಸಿಮೆಂಟ್ ಮಾರಾಟಗಾರರ ಸಂಘದವರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

‘ಸಮಸ್ಯೆ ಬಗೆಹರಿಯದಿದ್ದರೆ ಸೋಮವಾರ (ಸೆ.28)ದಿಂದ ಸಿಮೆಂಟ್ ಮಾರಾಟ ಬಂದ್ ಮಾಡಲಾಗುವುದು’ ಎಂದು ತಿಳಿಸಿದರು.

‘ಬೆಲೆಯಲ್ಲಿ ಸ್ಥಿರತೆ ಕಾಪಾಡುವಂತೆ ಕೋರಿದರೂ ಕಂಪನಿಗಳವರು ಸ್ಪಂದಿಸುತ್ತಿಲ್ಲ. ಹೀಗಾಗಿ, ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಬೇಕು. ಈ ಮೂಲಕ ಜನರಿಗೂ ಅನುಕೂಲ ಮಾಡಿಕೊಡಬೇಕು’ ಎಂದು ಜಿಲ್ಲಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಈರಣ್ಣ ಜಿ. ದಯಣ್ಣವರ ಮಾತನಾಡಿ, ‘ಕಡಿಮೆ ಬೆಲೆಗೆ ಸಿಮೆಂಟ್ ಮಾರಾಟ ಮಾಡಿ ಲಾಕ್‍ಡೌನ್ ಸಂದರ್ಭದಲ್ಲಿನ ಹಾನಿ ತಪ್ಪಿಸಿಕೊಳ್ಳಬೇಕು ಮತ್ತು ವ್ಯತ್ಯಾಸದ ಹಣವನ್ನು ನಂತರ ಪಾವತಿಸುತ್ತೇವೆ ಎಂದು ಕಂಪನಿಗಳವರು ತಿಳಿಸಿದ್ದರು. ಆದರೆ, ಈಗ ಪಾವತಿಸಲು ನಿರಾಕರಿಸುತ್ತಿದ್ದಾರೆ. ಬೆಲೆ ಏರುತ್ತಿರುವುದರಿಂದ ಗ್ರಾಹಕರು ಕೂಡ ಸಿಮೆಂಟ್ ಖರೀದಿಗೆ ಹಿಂಜರಿಯುತ್ತಿದ್ದಾರೆ. ಇದರಿಂದ ನಮಗೆ ಬಹಳ ನಷ್ಟ ಉಂಟಾಗುತ್ತಿದೆ’ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಶಿಕ್ಷಿಸುವುದಕ್ಕಿಂತ ಸರಿಯಾದ ದಾರಿಗೆ ತರೋದೇ ನಮ್ಮ ಧರ್ಮ: ನಿಂದಿಸಿದ ಮಕ್ಕಳನ್ನು ಕ್ಷಮಿಸಿದ ಮೋದಿ

Spread the loveನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಘಟನೆ ಮತ್ತು ತಮ್ಮ ಹಾಗೂ ತಮ್ಮ ದಿವಂಗತ ತಾಯಿಯವರ ವಿರುದ್ಧ ವ್ಯಕ್ತವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ