Breaking News

ಫಾದರ್‌ ಲೈಂಗಿಕ ಕಿರುಕುಳ: SP ಕಚೇರಿ ಆವರಣದಲ್ಲಿ ಆತ್ಮಹತ್ಯೆಗೆ ಯತ್ನ

Spread the love

ಕಲಬುರಗಿ: ಫಾದರ್​ನಿಂದ‌ ಲೈಂಗಿಕ ಕಿರುಕುಳ ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ.

 ಕಲಬುರಗಿ ನಗರದ ಸೆಂಟ್ ಮೇರಿ ಕ್ಯಾಥೆಡ್ರಲ್ ಚರ್ಚ್​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಸಂತ್ರಸ್ತೆಗೆ ಚರ್ಚ್​ನ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ಥೆಗೆ ಆರೋಪಿಸಿದ್ದಾರೆ.

ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದಡೆ ಸಿಸ್ಟರ್ ಅಂಥೋನಿ ಮೇರಿ ಅನ್ನೋರು ಬಾಧಿತಳ ಮೇಲೆ ನಕಲಿ ಪೇಸ್ ಬುಕ್ ಖಾತೆ ಸೃಷ್ಟಿಸಿರುವ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಿಸಿಎನ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆಗೆ ಸಂತ್ರಸ್ತೆಯನ್ನು ಸಿಸಿಎನ್ ಪೊಲೀಸರು ಕರೆದಿದ್ರು. ಈ ವೇಳೆ ನನಗೆ ನ್ಯಾಯ ಸಿಗುತ್ತಿಲ್ಲ‌ ಅಂತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಸಂತ್ರಸ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ