Breaking News

ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ?

Spread the love

 

ಬೆಂಗಳೂರು: ವಿದ್ಯುತ್, ಭೂಸುಧಾರಣಾ ಕಾಯ್ದೆ ಸುಗ್ರೀವಾಜ್ಞೆ ವಿರೋಧಿಸಿ ಶುಕ್ರವಾರ ರೈತ ಸಂಘಟನೆಗಳು, ನಾರಾಯಣ ಗೌಡ ನೇತೃತ್ವದ ಕರವೇ, ಕಾರ್ಮಿಕ ಸಂಘಟನೆಗಳು, ದಲಿತ ಸಂಘಟನೆಗಳು ಸೇರಿದಂತೆ 32 ಕ್ಕೂ ಹೆಚ್ಚು ಸಂಘಟನೆಗಳು ಕರ್ನಾಟಕ ಬಂದ್ ಗೆ ಬೆಂಬಲ ಸೂಚಿಸಿವೆ ಎನ್ನಲಾಗಿದೆ.

ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ರೈತರು ಬಂದ್ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆಯಾಗುವ ಸಾಧ್ಯತೆ ಇದೆ.

ಹಾಗಾದ್ರೆ ಕರ್ನಾಟಕ ಬಂದ್ ವೇಳೆ ಏನಿರುತ್ತೆ? ಏನಿರಲ್ಲ ? ಇಲ್ಲಿದೆ ನೋಡಿ ಮಾಹಿತಿ

ಏನಿರುತ್ತೆ?

ಕರ್ನಾಟಕ ಬಂದ್ ವೇಳೆ ಹಾಲು, ಹಣ್ಣು, ತರಕಾರಿ, ಮೆಡಿಕಲ್ ಸ್ಟೋರ್ಸ್, ಆಸ್ಪತ್ರೆ ಸೇವೆಗಳು ಇರಲಿವೆ. ಹೋಟೆಲ್ ಗಳು ಎಂದಿನಂತೆ ಓಪನ್ ಇರಲಿದ್ದು, ಕೆಎಸ್‌ಆರ್ ಟಿಸಿ, ಬಿಎಂಟಿಸಿ, ಮೆಟ್ರೋ, ರೈಲು, ವಿಮಾನ ಸಂಚಾರ ಇರಲಿದೆ.

ಏನಿರಲ್ಲ?

ಓಲಾ-ಉಬರ್, ಆಟೋ-ಟ್ಯಾಕ್ಸಿ ಸಂಘಗಳು ಬಂದ್ ಗೆ ಬೆಂಬಲ ನೀಡಿದ್ದು, ಈ ಸೇವೆಗಳು ಇರುವುದಿಲ್ಲ. ಖಾಸಗಿ ಬಸ್, ಲಾರಿ ಸೇವೆಗಳು ಬಂದ್ ಇರಲಿವೆ ಎನ್ನಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ