Breaking News

ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್

Spread the love

ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು.

ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು ಡಿ ವೃಂದದ ಹುದ್ದೆಗಳಿಗೆ ಶೇ. 100 ಕನ್ನಡಿಗರನ್ನು ನೇಮಕ ಮಾಡಿಕೊಳ್ಳಬೇಕೆಂದು ಪ್ರಸ್ತಾಪಿಸಲಾಗಿದೆ. ಆದರೆ ಅದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ.

ಎ ಮತ್ತು ಬಿ ವೃಂದದಲ್ಲೂ ಆದ್ಯತೆ ಮೇರೆಗೆ ಕನ್ನಡಿಗರಿಗೆ ಹೆಚ್ಚಿನ ಪ್ರಾಶಸ್ತ್ರಯ ನೀಡಬೇಕೆಂಬ ನಿಯಮ ಜಾರಿಗೊಳಿಸಲು ಚರ್ಚಿಸಲಾಗುತ್ತಿದ್ದು, ಶೀಘ್ರದಲ್ಲೇ ಅಂತಿಮ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾ ಮೇಲೆ ಕಲ್ಲು ತೂರಾಟ

Spread the loveಕಾರವಾರ: ತಾಲೂಕಿನ ತಲಾಂದ ಸಾರ್ವಜನಿಕ ಗಣೇಶೋತ್ಸವ  ಸಮಿತಿಯ ವತಿಯಿಂದ ಬುಧವಾರ ರಾತ್ರಿ ಆಯೋಜಿಸಲಾಗಿದ್ದ ಗಣೇಶ ವಿಸರ್ಜನಾ ಮೆರವಣಿಗೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ